ಆ್ಯಪ್ನಗರ

ಎಲ್ಲ ದಾರಿಗಳೂ ಬಂದ್: ಮುಕೇಶ್ ಸಿಂಗ್ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್!

ಗಲ್ಲುಶಿಕ್ಷೆಯಿಂದ ಪಾರಾಗಲು ಕಾನೂನಿನಲ್ಲಿರುವ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳುತ್ತಿರುವ ನಿರ್ಭಯಾ ಹಂತಕರಿಗೆ ಸುಪ್ರೀಂಕೋರ್ಟ್ ತನ್ನ ಬಾಗಿಲನ್ನು ಬಂದ್ ಮಾಡಿದೆ. ಅಪರಾಧಿಗಳು ಕಾನೂನಿನ ಎಲ್ಲಾ ಅವಕಾಶಗಳನ್ನೂ ಬಳಸಿಕೊಂಡಿದ್ದಾರೆ ಎಂದಿರುವ ಸುಪ್ರೀಂಕೋರ್ಟ್, ಗಲ್ಲುಶಿಕ್ಷೆ ಪ್ರಶ್ನಿಸಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

Vijaya Karnataka Web 16 Mar 2020, 6:17 pm
ನವದೆಹಲಿ: ಗಲ್ಲುಶಿಕ್ಷೆ ಪ್ರಶ್ನಿಸಿ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಒ್ರಮುಖ ಆರೋಪಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
Vijaya Karnataka Web mukesh singh
ಗಲ್ಲುಶಿಕ್ಷೆ ಪ್ರಶ್ನಿಸಿ ನಿರ್ಭಯಾ ಹಂತಕರಲ್ಲಿ ಓರ್ವನಾದ ಮುಕೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.


ಅಪರಾಧಿಗಳ ಎಲ್ಲಾ ಕಾನೂನು ಅವಕಾಶಗಳು ಮುಗಿದಿದ್ದು, ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಈ ಮೂಲಕ ಗಲ್ಲುಶಿಕ್ಷೆ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ನಾಲ್ವರು ಅಪಾರಾಧಗಳಿಗೆ ಕಾನೂನು ತನ್ನ ಬಾಗಿಲನ್ನು ಬಂದ್ ಮಾಡಿದೆ.

ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಪ್ರಕ್ರಿಯೆ ಸರಿಯಿಲ್ಲ: ನಿರ್ಭಯಾ ಹಂತಕನ ಹೊಸ ಕ್ಯಾತೆ..!

ತನಗೆ ವಿಧಿಸಲಾಗಿರುವ ಗಲ್ಲುಶಿಕ್ಷೆ ಕಾನೂನುಬಾಹಿರವಾಗಿದ್ದು, ಶಿಕ್ಷೆಯನ್ನು ಜೀವಾವಧಿಗೆ ಪರಿವರ್ತಿಸುವಂತೆ ಕೋರಿ ಮುಕೇಶ್ ಸಿಂಗ್ ಸುಪ್ರೀಂಕೋರ್ಟ್'ಗೆ ಹೊಸದಾಗಿ ಅರ್ಜಿ ಸಲ್ಲಿಸಿದ್ದ.



ಆದರೆ ಈ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು, ನಾಲ್ವರೂ ಅಪರಾಧಿಗಳು ತಮ್ಮ ಕಾನೂನಾತ್ಮಕ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಂಡಿದ್ದಾರೆ ಎಂದು ಸ್ಪಷ್ಡಪಡಿಸಿದೆ.

ಈ ಹಿನ್ನೆಲೆಯಲ್ಲಿ ಇದೇ ಮಾ.೨೦ರಂದು ನಾಲ್ವರೂ ಅಪರಾಧಿಗಳಿಗೆ ಗಲ್ಲುಶಿಕ್ಷೆ ಜಾರಿಯಾಗುವುದು ಖಚತವಾಗಿದ್ದು, ತಿಹಾರ್ ಜೈಲಿನಲ್ಲಿ ಗಲ್ಲುಶಿಕ್ಷೆ ಜಾರಿಗೆ ತಯಾರಿ ನಡೆಸಲಾಗುತ್ತಿದೆ.

ನಿರ್ಭಯಾ ಸ್ನೇಹಿತನ ವಿರುದ್ಧ ಎಫ್‌ಐಆರ್‌ ದಾಖಲಿಸಿ: ಗಲ್ಲಿನಿಂದ ಪಾರಾಗಲು ಹಂತಕರ ಹೊಸ ಯತ್ನ

ದಯಾಮರಣ ನೀಡಿ:

ಇದೇ ವೇಳೆ ನಿರ್ಭಯಾ ಅಪರಾಧಿಗಳಿಗೆ ದಯಾಮರಣ ನೀಡಿ ಎಂದು ಕೋರಿ ಕುಟುಂಬಸ್ಥರು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದು, ಜೈಲಿನಲ್ಲಿ ನಿರಂತರವಾಗಿ ಕಿರುಕುಳ ಅನುಭವಿಸುತ್ತಿರುವ ನಾಲ್ವರಿಗೂ ದಯಾಮರಣ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ