ಆ್ಯಪ್ನಗರ

Sabarimala Temple Verdict: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶ - ಸುಪ್ರೀಂ ಅಸ್ತು

ಪ್ರಾರ್ಥನೆಗೆ ಯಾವುದೇ ತಾರತಮ್ಯ ಇರಬಾರದು. ದೇಹಪ್ರಕೃತಿಯ ಆಧಾರದ ಮೇಲೆ ತಾರತಮ್ಯ ಮಾಡಬಾರದು. ಮಹಿಳೆಯರು ತಮ್ಮ ಹಕ್ಕಿಗಾಗಿ ಹೋರಾಡಿದ್ದಾರೆ. ಅವರನ್ನು ತಾರತಮ್ಯದಿಂದ ನೋಡಲಾಗುತ್ತಿದೆ.

TNN & Agencies 28 Sep 2018, 12:16 pm
ಹೊಸದಿಲ್ಲಿ: ಕೇರಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಅನುಮತಿ ನೀಡಿದ್ದು ಶುಕ್ರವಾರ (ಸೆಪ್ಟೆಂಬರ್ 28) ತೀರ್ಪು ಪ್ರಕಟಿಸಿದೆ. ಐವರು ಸದಸ್ಯರ ಸಾಂವಿಧಾನಿಕ ಪೀಠ ತೀರ್ಪು ನೀಡಿದ್ದು ಈ ಮೂಲಕ ಮಹಿಳೆಯರ ಸಮಾನತೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
Vijaya Karnataka Web shabarimala


ದೇವಾಲಯಕ್ಕೆ 10-50 ವರ್ಷ ವಯೋಮಾನದ ಮಹಿಳೆಯರನ್ನು ನಿಷೇಧಿಸಿರುವುದು ಸಂವಿಧಾನದ ಮೂಲ ತತ್ವಗಳ ಉಲ್ಲಂಘನೆಯಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹೇಳಿದ್ದಾರೆ.

ಧಾರ್ಮಿಕ ಮುಂಖಂಡರೊಂದಿಗೆ ಚರ್ಚಿಸಿ ತೀರ್ಪನ್ನು ಮರು ಪರಿಶೀಲಿಸುವಂತೆ ಮನವಿ ಸಲ್ಲಿಸುತ್ತೇವೆ
ಪದ್ಮಕುಮಾರ್, ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧ್ಯಕ್ಷ



ಪ್ರಾರ್ಥನೆಗೆ ಯಾವುದೇ ತಾರತಮ್ಯ ಇರಬಾರದು. ದೈಹಿಕ ಆಧಾರದ ಮೇಲೆ ತಾರತಮ್ಯ ಮಾಡಬಾರದು. ಮಹಿಳೆಯರು ತಮ್ಮ ಹಕ್ಕಿಗಾಗಿ ಹೋರಾಡಿದ್ದಾರೆ. ಅವರನ್ನು ತಾರತಮ್ಯದಿಂದ ನೋಡಲಾಗುತ್ತಿದೆ. ಹಾಗಾಗಿ ಅವರಿಗೂ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಸುಪ್ರೀಂ ಐತಿಹಾಸಿಕ ತೀರ್ಪು ನೀಡಿದೆ.


ಸುಪ್ರೀಂಕೋರ್ಟ್‍ನ ತೀರ್ಪಿನ ಬಗ್ಗೆ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧ್ಯಕ್ಷ ಪದ್ಮಕುಮಾರ್ ಪ್ರತಿಕ್ರಿಯಿಸಿದ್ದು, "ಧಾರ್ಮಿಕ ಮುಖಂಡರೊಂದಿಗೆ ಚರ್ಚಿಸಿ ತೀರ್ಪನ್ನು ಮರು ಪರಿಶೀಲಿಸುವಂತೆ ಮನವಿ ಸಲ್ಲಿಸುತ್ತೇವೆ" ಎಂದಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ