ಆ್ಯಪ್ನಗರ

ಲೈಂಗಿಕ ಕಿರುಕುಳ ಆರೋಪಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಟೆಕಿ

ಜೆನ್‌ಪ್ಯಾಕ್ಟ್ ಸಂಸ್ಥೆಯ ಸಹಾಯಕ ಉಪಾಧ್ಯಕ್ಷ ಸ್ವರೂಪ್‌ ರಾಜ್‌(35), ನೋಯಿಡಾದ ಸೆಕ್ಟರ್‌ 137ನಲ್ಲಿರುವ ತಮ್ಮ ನಿವಾಸದಲ್ಲಿ ಸೀಲಿಂಗ್‌ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 21 Dec 2018, 5:00 am
ನೋಯಿಡಾ: ಲೈಂಗಿಕ ಕಿರುಕುಳದ ಆರೋಪದ ಮೇಲೆ ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಂಡಿದ್ದ ಜಾಗತಿಕ ಐಟಿ ಕಂಪನಿಯೊಂದರ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಪ್ರದೇಶದ ನೋಯಿಡಾದಲ್ಲಿ ನಡೆದಿದೆ. ಜೆನ್‌ಪ್ಯಾಕ್ಟ್ ಸಂಸ್ಥೆಯ ಸಹಾಯಕ ಉಪಾಧ್ಯಕ್ಷ ಸ್ವರೂಪ್‌ ರಾಜ್‌(35), ನೋಯಿಡಾದ ಸೆಕ್ಟರ್‌ 137ನಲ್ಲಿರುವ ತಮ್ಮ ನಿವಾಸದಲ್ಲಿ ಸೀಲಿಂಗ್‌ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್‌ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳಾ ಉದ್ಯೋಗಿಗಳು ಇತ್ತೀಚಿಗೆ ಅವರ ವಿರುದ್ಧ ದೂರು ನೀಡಿದ್ದರು. ತನಿಖೆಯ ಭಾಗವಾಗಿ ಸಂಸ್ಥೆ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿತ್ತು. ಆರೋಪದಿಂದ ಮನನೊಂದ ರಾಜ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ. 2007ರಲ್ಲಿ ಜೆನ್‌ಪ್ಯಾಕ್ಟ್ ಕಂಪನಿಗೆ ಸೇರಿದ್ದ ಅವರು, ಇತ್ತೀಚಿಗಷ್ಟೆ ಉನ್ನತ ಹುದ್ದೆಗೆ ಬಡ್ತಿ ಹೊಂದಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ