ಆ್ಯಪ್ನಗರ

ತೆರಿಗೆ ವಿವಾದ: ಸಿಧು ಬ್ಯಾಂಕ್‌ ಖಾತೆಗಳ ಸ್ತಂಭನ

ಮಾಜಿ ಕ್ರಿಕೆಟಿಗ, ರಾಜಕಾರಣಿ ಹಾಗೂ ಪಂಜಾಬ್‌ನ ಪ್ರವಾಸೋದ್ಯಮ ಸಚಿವ ನವಜೋತ್‌ ಸಿಂಗ್‌ ಸಿಧು ಅವರ ಬ್ಯಾಂಕ್‌ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಸ್ತಂಭನಗೊಳಿಸಿದೆ.

Vijaya Karnataka Web 31 Mar 2018, 4:50 pm
ಹೊಸದಿಲ್ಲಿ: ಮಾಜಿ ಕ್ರಿಕೆಟಿಗ, ರಾಜಕಾರಣಿ ಹಾಗೂ ಪಂಜಾಬ್‌ನ ಪ್ರವಾಸೋದ್ಯಮ ಸಚಿವ ನವಜೋತ್‌ ಸಿಂಗ್‌ ಸಿಧು ಅವರ ಬ್ಯಾಂಕ್‌ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಸ್ತಂಭನಗೊಳಿಸಿದೆ.
Vijaya Karnataka Web ನವಜೋತ್ ಸಿಂಗ್ ಸಿಧು


ಆದಾಯ ತೆರಿಗೆ ಬಾಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಧು ಅವರ ಮೇಲ್ಮನವಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಐಟಿ ಇಲಾಖೆ ಈ ಕ್ರಮ ಕೈಗೊಂಡಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದರು. ಆದರೆ ಸಿಧು ಪಾವತಿಸಬೇಕಾದ ತೆರಿಗೆಯ ಮೊತ್ತವನ್ನು ಬಹಿರಂಗಪಡಿಸಲು ನಿರಾಕರಿಸಿದರು.

ತಮ್ಮ ಆದಾಯದ ಮೊತ್ತವನ್ನು ಸಮರ್ಥಿಸಿಕೊಳ್ಳಲು ಸೂಕ್ತ ದಾಖಲೆ ನೀಡುವಲ್ಲಿ ಹಾಗೂ ತೆರಿಗೆ ಪಾವತಿಸಲು ವಿಫಲರಾದ ಹಿನ್ನೆಲೆಯಲ್ಲಿ ಸಿಧು ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಸಿಧು ಅವರು 52 ಲಕ್ಷ ರೂ.ಗಳ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಈ ಹಿಂದೆ ಸುದ್ದಿಸಂಸ್ಥೆಯೊಂದು ವರದಿ ಮಾಡಿತ್ತು.

NEW DELHI: Cricketer-turned politician and Punjab tourism minister Navjot Singh Sidhu's bank accounts have been frozen by the income tax department after he lost an appeal related to his tax assessment.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ