ಆ್ಯಪ್ನಗರ

ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಬಾಂಬ್‌ ಬೆದರಿಕೆ: ಅರ್ಚಕನ ಸೆರೆ

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಕಾರ್ಯಕ್ರಮಕ್ಕೆ ಬಾಂಬ್‌ ಸ್ಫೋಟದ ಬೆದರಿಕೆ ಹಿನ್ನೆಲೆಯಲ್ಲಿ ದೇವಸ್ಥಾನ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ.

TIMESOFINDIA.COM 6 Aug 2018, 12:39 pm
ತಿರುವನಂತಪುರಂ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಕಾರ್ಯಕ್ರಮಕ್ಕೆ ಬಾಂಬ್‌ ಸ್ಫೋಟದ ಬೆದರಿಕೆ ಹಿನ್ನೆಲೆಯಲ್ಲಿ ದೇವಸ್ಥಾನ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web priest


ಚಿರಕ್ಕಲ್‌ ಭಗವತಿ ದೇವಾಲಯದ ಅರ್ಚಕ ಜಯರಾಂ ಬಂಧಿತ.

ಮೂರು ದಿನಗಳ ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌, ಮಂಗಳವಾರ ಸೈಂಟ್‌ ಥಾಮಸ್‌ ಕಾಲೇಜಿನ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಲೇಜು ಆವರಣದಲ್ಲಿ ಬಾಂಬ್‌ ಸ್ಫೋಟಿಸುವುದಾಗಿ ಭಾನುವಾರ ರಾತ್ರಿ ಸುಮಾರು ಒಂದು ಗಂಟೆಗೆ ಪೊಲೀಸ್‌ ಕಂಟ್ರೋಲ್‌ ರೂಂಗೆ ಕರೆ ಮಾಡಿದ್ದಾರೆ.

ಮೊಬೈಲ್‌ ನಂಬರ್‌ ಟ್ರೇಸ್‌ ಮಾಡಿದ ಪೊಲೀಸರು, ಅರ್ಚಕನ್ನು ವಶಕ್ಕೆ ಪಡೆದಿದ್ದಾರೆ. ಅಮಲಿನಲ್ಲಿ ಈ ರೀತಿ ಮಾಡಿದ್ದಾಗಿ ವಿಚಾರಣೆ ವೇಳೆ ಅರ್ಚಕ ತಿಳಿಸಿದ್ದಾನೆ ಎನ್ನಲಾಗಿದೆ.

ಬುಧವಾರ ಗುರುವಾಯೂರು ದೇವಾಲಯಕ್ಕೆ ರಾಮನಾಥ್‌ ಕೋವಿಂದ್‌ ಭೇಟಿ ನೀಡಲಿದ್ದು, ಬಾಂಬ್‌ ಬೆದರಿಕೆ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ