ಆ್ಯಪ್ನಗರ

ದೇಶದಲ್ಲಿ ಮೂರು ಕೊರೊನಾ ಲಸಿಕೆಗಳು ಅಭಿವೃದ್ಧಿ ಹಂತದಲ್ಲಿವೆ: ಪ್ರಧಾನಿ ಮೋದಿ!

74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನವದೆಹಲಿಯ ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ, ದೇಶದಲ್ಲಿ ಸದ್ಯ 3 ಕೊರೊನಾ ಲಸಿಕೆಗಳು ಅಭಿವೃದ್ಧಿ ಹಂತದಲ್ಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.

Vijaya Karnataka Web 15 Aug 2020, 9:31 am
ನವದೆಹಲಿ: 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನವದೆಹಲಿಯ ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಒಂದುವರೆ ಗಂಟೆಗೂ ಅಧಿಕ ಕಾಲ ಭಾಷಣ ಮಾಡಿದರು.
Vijaya Karnataka Web Pm Modi
ದೇಶದಲ್ಲಿ ಮೂರು ಕೊರೊನಾ ವೈರಸ್ ಲಸಿಕೆ ಅಭಿವೃದ್ಧಿ ಹಂತದಲ್ಲಿವೆ ಎಂದ ಪ್ರಧಾನಿ


ಈ ವೇಳೆ ಮಾರಕ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ದೇಶದಲ್ಲಿ ಸದ್ಯ 3 ಕೊರೊನಾ ಲಸಿಕೆಗಳು ಅಭಿವೃದ್ಧಿ ಹಂತದಲ್ಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ನ್ಯಾಶನಲ್ ಡಿಜಿಟಲ್ ಹೆಲ್ತ್ ಮಿಷನ್ ಯೋಜನೆ ಘೋಷಿಸಿದ ಪ್ರಧಾನಿ ಮೋದಿ: ಪ್ರತಿ ಭಾರತೀಯನಿಗೂ ಹೆಲ್ತ್ ಐಡಿ!

ಮಾರಕ ಕೊರೊನಾ ವೈರಸ್‌ಗೆ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂದು ಎಲ್ಲರೂ ಕೇಳುತ್ತಿದ್ದಾರೆ. ಸದ್ಯಕ್ಕೆ ಮೂರು ಕೊರೊನಾ ಲಸಿಕೆಗಳು ಅಭಿವೃದ್ಧಿ ಹಂತದಲ್ಲಿದ್ದು, ತಜ್ಞರ ಅಂಕಿತ ದೊರೆಯುತ್ತಿದ್ದಂತೇ ಅವುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಮೋದಿ ಹೇಳಿದರು.

ಅಭಿವೃದ್ಧಿ ಹಂತದಲ್ಲಿರುವ ಮೂರು ಕೊರೊನಾ ಲಸಿಕೆಗಳನ್ನು ವೈದ್ಯ ವಿಜ್ಞಾನಿಗಳು ಪರಿಶೀಲನೆ ನಡೆಸುತ್ತಿದ್ದು, ಅವುಗಳಿಗೆ ಅನುಮೋದನೆ ದೊರೆತ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಪ್ರಧಾನಿ ಮೋದಿ ನುಡಿದರು.


ಎಲ್ಲ ಸಂಕಷ್ಟಗಳನ್ನು ಎದುರಿಸುವ ಛಲಕ್ಕೆ ಸ್ವಾತಂತ್ರ್ಯ ಹೋರಾಟವೇ ಪ್ರೇರಣೆ: ಪ್ರಧಾನಿ ಮೋದಿ!

ಅಲ್ಲದೇ ಅನುಮೋದನೆ ಪಡೆದ ಲಸಿಕೆಯ ಉತ್ಪಾದನೆ, ಹಂಚಿಕೆಯ ಕುರಿತು ಈಗಾಗಲೇ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಪ್ರತಿ ಭಾರತೀಯನಿಗೂ ಕೊರೊನಾ ಲಸಿಕೆ ಲಭ್ಯವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ