ಆ್ಯಪ್ನಗರ

ದೀದಿ ಕೈಬಿಟ್ಟ ಅರಿಂದಮ್ ಭಟ್ಟಾಚಾರ್ಯ: ಬಿಜೆಪಿ ಸೇರಿದ ಮತ್ತೋರ್ವ ಟಿಎಂಸಿ ಶಾಸಕ!

ಪಶ್ಚಿಮ ಬಂಗಾಳದ ಶಾಂತಿಪುರ ವಿಧಾನಸಭಾ ಕ್ಷೇತ್ರದ ಟಿಎಂಸಿ ಶಾಸಕ ಅರಿಂದಮ್ ಭಟ್ಟಾಚಾರ್ಯ, ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ, ಪಶ್ಚಿಮ ಬಂಗಾಳ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯವರ್ಗೀಯ ಸಮ್ಮುಖದಲ್ಲಿ ಅರಿಂದಮ್ ಭಟ್ಟಾಚಾರ್ಯ ಪಕ್ಷಕ್ಕೆ ಸೇರ್ಪಡೆಗೊಂಡರು.

Vijaya Karnataka Web 20 Jan 2021, 6:10 pm
ಹೊಸದಿಲ್ಲಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೇ ಪಶ್ಚಿಮ ಬಂಗಾಳದಲ್ಲಿ ತೀವ್ರ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಒಬ್ಬರ ಹಿಂದೆ ಮತ್ತೊಬ್ಬರಂತೆ ಆಡಳಿತಾರೂಢ ಟಿಎಂಸಿ ಶಾಸಕರು ಬಿಜೆಪಿ ಸೇರುತ್ತಿದ್ದಾರೆ.
Vijaya Karnataka Web Arindam Bhattacharya
ಬಿಜೆಪಿ ಸೇರ್ಪಡೆಗೊಂಡ ಅರಿಂದಮ್ ಭಟ್ಟಾಚಾರ್ಯ


ಈಗಾಗಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಹಲವು ಟಿಎಂಸಿ ನಾಯಕರು ಬಿಜೆಪಿ ಸೇರಿದ್ದು, ಇದೀಗ ಮತ್ತೋರ್ವ ಟಿಎಂಸಿ ಶಾಸಕ ಅರಿಂದಮ್ ಭಟ್ಟಾಚಾರ್ಯ ಕೂಡ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹೌದು, ಪಶ್ಚಿಮ ಬಂಗಾಳದ ಶಾಂತಿಪುರ ವಿಧಾನಸಭಾ ಕ್ಷೇತ್ರದ ಟಿಎಂಸಿ ಶಾಸಕ ಅರಿಂದಮ್ ಭಟ್ಟಾಚಾರ್ಯ, ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

'ನಂದಿಗ್ರಾಮದಿಂದ ಸ್ಪರ್ಧಿಸುವುದಾದರೆ ಮಾಜಿ ಸಿಎಂ ಎಂಬ ಲೆಟರ್ ಪ್ಯಾಡ್ ರೆಡಿ ಮಾಡಿಕೊಳ್ಳಿ'!

ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ, ಪಶ್ಚಿಮ ಬಂಗಾಳ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯವರ್ಗೀಯ ಸಮ್ಮುಖದಲ್ಲಿ ಅರಿಂದಮ್ ಭಟ್ಟಾಚಾರ್ಯ ಪಕ್ಷಕ್ಕೆ ಸೇರ್ಪಡೆಗೊಂಡರು.


ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅರಿಂದಮ್ ಭಟ್ಟಾಚಾರ್ಯ, ನಾನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆರಿಸಿ ಬಂದಿದ್ದೆ. ಆದರೆ ಕ್ಷೇತ್ರದ ಅಭಿವೃದ್ಧಿ ಹಿತದೃಷ್ಟಿಯಿಂದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೆ. ಆದರೆ ಮಮತಾ ಬ್ಯಾನರ್ಜಿ ಕೂಡ ತಮ್ಮ ಅಭಿವೃದ್ಧಿ ಕನಸಿಗೆ ಸಹಾಯ ಮಾಡದೇ ಇದ್ದಿದ್ದರಿಂದ ನೊಂದು ಪಕ್ಷ ತ್ಯಜಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧೆ: ಪಕ್ಷ ತೊರೆದ ಸುವೇಂದು ಅಧಿಕಾರಿಗೆ ಮಮತಾ ಬ್ಯಾನರ್ಜಿ ರಣವೀಳ್ಯ

ರಾಜ್ಯದಲ್ಲಿ ಬಿಜೆಪಿ ಬಲವರ್ಧನೆಗೊಳ್ಳುತ್ತಿದೆ. ರಾಜ್ಯದ ಅಭಿವೃದ್ಧಿಯ ಬಗ್ಗೆ ಬಿಜೆಪಿಗೆ ಸ್ಪಷ್ಟ ಆಲೋಚನೆಗಳಿದ್ದು, ಇದೇ ಕಾರಣಕ್ಕೆ ಅಭಿವೃದ್ಧಿ ರಾಜಕೀಯವನ್ನು ಬೆಂಬಲಿಸಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದು ಅರಿಂದಮ್ ಭಟ್ಟಾಚಾರ್ಯ ಈ ವೇಳೆ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ