ಆ್ಯಪ್ನಗರ

ಮಧ್ಯ ಪ್ರದೇಶ, ಮಿಜೋರಾಂ, ರಾಜಸ್ಥಾನ, ಛತ್ತೀಸ್‌ಗಡ್ ವಿಧಾನಸಭೆ ಚುನಾವಣೆ ದಿನಾಂಕ ಇಂದು ಪ್ರಕಟ

ನಾಲ್ಕು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸಲು ಚುನಾವಣೆ ಆಯೋಗ ಸಿದ್ಧತೆ ನಡೆಸಿದೆ.

TIMESOFINDIA.COM 6 Oct 2018, 2:12 pm
ಹೊಸದಿಲ್ಲಿ: ಮಧ್ಯ ಪ್ರದೇಶ, ಮಿಜೋರಾಂ, ರಾಜಸ್ಥಾನ ಹಾಗೂ ಛತ್ತೀಸ್‌ಗಡ್ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ದಿನಾಂಕವನ್ನು ಪ್ರಕಟಿಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ.
Vijaya Karnataka Web ec


ಈ ಸಂಬಂಧ ಕೇಂದ್ರ ಚುನಾವಣಾ ಆಯೋಗವು ಶನಿವಾರ ಮಧ್ಯಾಹ್ನ ಸುದ್ದಿಗೋಷ್ಠಿ ಆಯೋಜಿಸಿದ್ದು, ಇದೇ ವೇಳೆ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ದಿನಾಂಕವನ್ನು ಸಹ ನಿಗದಿಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಡಿಸೆಂಬರ್ ಮೊದಲ ವಾರದಲ್ಲೇ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಮಧ್ಯ ಪ್ರದೇಶ, ಮಿಜೋರಾಂ, ರಾಜಸ್ಥಾನ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಯಲಿದ್ದು, ಛತ್ತೀಸ್‌ಗಡದಲ್ಲಿ ಮಾತ್ರ ಎರಡು ಹಂತದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ