ಆ್ಯಪ್ನಗರ

ಹಿಮಾಚಲ ಪ್ರದೇಶ: ಪ್ರಪಾತಕ್ಕೆ ಉರುಳಿದ ಬಸ್‌ಗೆ 11 ಬಲಿ

ಲೋರಾನ್‌ನಿಂದ ಪೂಂಚ್‌ಗೆ ಪ್ರಯಾಣಿಕರನ್ನು ಒಯ್ಯುತ್ತಿದ್ದ ಬಸ್‌ ಮಂಡಿ ತೆಹ್ಸಿಲ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಪ್ರಪಾತಕ್ಕೆ ಉರುಳಿದೆ. ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು ಗಾಯಾಳುಗಳನ್ನು ಉಪ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ವರೆಗೆ 11 ಶವಗಳನ್ನು ಹೊರತೆಗೆಯಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಭೀತಿ ಇದೆ ಎನ್ನಲಾಗಿದೆ.

Times Now 8 Dec 2018, 12:42 pm
[This story originally published in Timesnews.com on dec 8, 2018]
Vijaya Karnataka Web poonch


ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಜಿಲ್ಲೆಯಲ್ಲಿ ಬಸ್‌ ಪ್ರಪಾತಕ್ಕೆ ಉರುಳಿ 11 ಮಂದಿ ಸಾವನ್ನಪ್ಪಿದ್ದಾರೆ. ಪೂಂಚ್‌ನ ಮಂಡಿ ತೆಹ್ಸಿಲ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಲೋರಾನ್‌ನಿಂದ ಪೂಂಚ್‌ಗೆ ತೆರಳುತ್ತಿತ್ತು ಎಂದು ಗೊತ್ತಾಗಿದೆ.

ಶನಿವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು ಗಾಯಾಳುಗಳನ್ನು ಉಪ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ವರೆಗೆ 11 ಶವಗಳನ್ನು ಹೊರತೆಗೆಯಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಭೀತಿ ಇದೆ ಎನ್ನಲಾಗಿದೆ.


ಮೂಲಗಳ ಪ್ರಕಾರ. ಈ ವರೆಗೆ ಗಾಯಗೊಂಡಿದ್ದ 17 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವವರನ್ನು ಹೆಲಿಕಾಪ್ಟರ್‌ ಮೂಲಕ ಜಮ್ಮುವಿಗೆ ರವಾನಿಸಲು ತೀರ್ಮಾನಿಸಲಾಗಿದೆ. ತಿರುವಿನಲ್ಲಿ ಬಸ್‌ ಚಾಲಕನ ನಿಯಂತ್ರಣ ತಪ್ಪಿರುವುದೇ ಘಟನೆಗೆ ಕಾರಣ ಎಂದು ಅಂದಾಜಿಸಲಾಗಿದೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ