ಆ್ಯಪ್ನಗರ

ದಲಿತ ಯುವಕನ ಜತೆ ಪ್ರೀತಿ: ಬುಡಕಟ್ಟು ಬಾಲಕಿ ತಳಿಸಿದ ಸಮುದಾಯದ ಜನ

ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಬುಡಕಟ್ಟು ಜನಾಂಗದ ಬಾಲಕಿ ಮೇಲೆ ತನ್ನದೇ ಸಮುದಾಯದ ಜನರು ಹಲ್ಲೆ ಮಾಡಿರುವ ಅಮಾನುಷ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

TIMESOFINDIA.COM 30 Jun 2019, 11:34 am
ಭೋಪಾಲ: ದಲಿತ ಯುವಕನೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ ಬುಡಕಟ್ಟು ಜನಾಂಗದ ಬಾಲಕಿ ಮೇಲೆ ತನ್ನದೇ ಸಮುದಾಯದ ಸದಸ್ಯರು ಕ್ರೂರವಾಗಿ ಥಳಿಸಿರುವ ಅಮಾನವೀಯ ಘಟನೆ ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ.

ಬಾಲಕಿ ದಲಿತ ಯುವಕನೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಾಳೆಂದು ತಮ್ಮ ಸಮುದಾಯದ ಜನರು ಸಾರ್ವಜನಿಕವಾಗಿಯೇ ಮನ ಬಂದಂತೆ ತಳಿಸಿದ್ದಾರೆ.

ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಘಟನೆ ಸಂಬಂಧ ಪ್ರಮುಖ ಆರೋಪಿಗಳ ವಿರುದ್ಧ ಹಲವು ಪ್ರಕರಣ ದಾಖಲಿಸಿರುವ ಪೊಲೀಸರು, ಸದ್ಯ ನಾಲ್ಕು ಆರೋಪಿಗಳನ್ನು ಬಂಧಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ