ಆ್ಯಪ್ನಗರ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ: ಭದ್ರತಾ ಪಡೆಗಳ ಗುಂಡೇಟಿಗೆ ಇಬ್ಬರು ಉಗ್ರರು ಬಲಿ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರಿದಿದೆ. ಬಂಡಿಪೊರಾದಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆಂದು ತಿಳಿದುಬಂದಿದೆ.

Vijaya Karnataka Web 11 Nov 2019, 11:29 am
ಶ್ರೀನಗರ: ಜಮ್ಮು - ಕಾಶ್ಮೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿ ಬಂದಿದೆ. ಬಂಡಿಪೊರಾದಲ್ಲಿ ಸ್ಥಳೀಯ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.
Vijaya Karnataka Web jammu kashmir



ಈ ಸುದ್ದಿ ಓದಿ: ಹೊಸದಿಲ್ಲಿ, ಕಾಶ್ಮೀರದಲ್ಲಿ ಉಗ್ರ ದಾಳಿಗೆ ಸಂಚು: ಗುಪ್ತಚರ ಇಲಾಖೆ ಮಾಹಿತಿ, ಹೈಅಲರ್ಟ್‌ ಘೋಷಣೆ

ಇತ್ತೀಚೆಗಷ್ಟೇ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಸ್ಥಾನ ಸ್ಥಾನಮಾನ ಪಡೆದುಕೊಂಡಿದೆ. ಈಗ ಮತ್ತೆ ದೇಶದ ಮುಕುಟವಾಗಿರುವ ಜಮ್ಮು ಕಾಶ್ಮೀರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರಿ ಪ್ರಮಾಣದಲ್ಲಿ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪುಲ್ವಾಮಾದಲ್ಲಿ ಮತ್ತೆ ಉಗ್ರ ಉಪಟಳ: ರೈಫಲ್‌ಗಳಿಂದ ದಾಳಿ

ಅಲ್ಲದೆ, ಉಗ್ರರ ಬಳಿ ಬಂದೂಕುಗಳು ಹಾಗೂ ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಎನ್‌ಕೌಂಟರ್‌ನಲ್ಲಿ ಬಲಿಯಾದ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ ಎಂದು ಸಹ ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.


ಉಗ್ರರ ಗುಂಡಿಗೆ ಹುತಾತ್ಮರಾದ ಬೆಳಗಾವಿ ಯೋಧ: ರಾಹುಲ್ ಸರ್ವೋಚ್ಛ ತ್ಯಾಗಕ್ಕೆ ಸೇನೆ ಸಲಾಂ

ಕಣಿವೆ ರಾಜ್ಯವಾಗಿದ್ದ ಜಮ್ಮು ಕಾಶ್ಮೀರ ಅಕ್ಟೋಬರ್‌ 31ರಂದು ಕೇಂದ್ರಾಡಳಿತ ಪ್ರದೇಶ ಸ್ಥಾನಮಾನ ಪಡೆದುಕೊಂಡಿತ್ತು. ಅಲ್ಲದೆ, ಜಮ್ಮು ಕಾಶ್ಮೀರ ರಾಜ್ಯದಲ್ಲಿದ್ದ ಲಡಾಖ್‌ ಅನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ