ಆ್ಯಪ್ನಗರ

ಪ್ರಧಾನಿ ಮೋದಿ ನೇತೃತ್ವದಲ್ಲಿ ಎರಡು ಯುದ್ಧಗಳನ್ನು ಗೆಲ್ಲಲಿದ್ದೇವೆ: ಅಮಿತ್ ಶಾ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಎರಡು ಯುದ್ಧಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೊರೊನಾ ವೈರಸ್ ಮತ್ತು ಚೀನಾ ಗಡಿ ಸಂಘರ್ಷದ ಕುರಿತು ಅಮಿತ್ ಶಾ ಈ ರೀತಿ ಹೇಳಿಕೆ ನೀಡಿದ್ದಾರೆ.

Vijaya Karnataka Web 28 Jun 2020, 2:15 pm
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಎರಡು ಯುದ್ಧಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೊರೊನಾ ವೈರಸ್ ಮತ್ತು ಚೀನಾ ಗಡಿ ಸಂಘರ್ಷದ ಕುರಿತು ಅಮಿತ್ ಶಾ ಈ ರೀತಿ ಹೇಳಿಕೆ ನೀಡಿದ್ದಾರೆ.
Vijaya Karnataka Web Amit Shah
ಕೇಂದ್ರ ಗೃಹ ಸಚಿವ ಅಮಿತ್ ಶಾ


ಸಂದರ್ಶನವೊಂದರಲ್ಲಿ ಮಾತನಾಡಿದ ಅಮಿತ್ ಶಾ, ದೇಶದಲ್ಲಿ ಕೊರೊನಾ ವೈರಸ್ ವಿರುದ್ಧ ಯುದ್ಧ ಸಾರಲಾಗಿದ್ದು, ಈ ಯುದ್ಧವನ್ನು ಗೆಲ್ಲುವುದು ನಮ್ಮೆಲ್ಲರ ಗುರಿಯಾಗಿದೆ ಎಂದು ಹೇಳಿದ್ದಾರೆ.

ಅದರಂತೆ ಲಡಾಖ್ ಗಡಿಯಲ್ಲಿ ಚೀನಾ ಸೇನೆಯ ಉಪಟಳವನ್ಮು ಯಶಸ್ವಿಯಾಗಿ ನಿಭಾಯಿಸಲಾಗಿದೆ ಎಂದು ಅಭಿಪ್ರಾಯಪಟ್ಟಿರುವ ಅಮಿತ್ ಶಾ, ಗಡಿಯಲ್ಲಿ ವಿನಾಕಾರಣ ಕ್ಯಾತೆ ತೆಗೆದ ಚೀನಾಗೆ ತಕ್ಕ ಉತ್ತರ ನೀಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.

ಪ್ರತಿ ಕೊರೊನಾ ಸಾವು ದಾಖಲಾಗಬೇಕು: ಅಧಿಕಾರಿಗಳಿಗೆ ಅಮಿತ್ ಶಾ ತಾಕೀತು!


ಇದೇ ವೇಳೆ ದೆಹಲಿಯಲ್ಲಿ ಕೊರೊನಾ ವೈರಸ್ ಸಮುದಾಯ ಪ್ರಸರಣ ಹಂತಕ್ಕೆ ತಲುಪಿಲ್ಲ ಎಂದು ಹೇಳಿದ ಅಮಿತ್ ಶಾ, ದೆಹಲಿ ಸರ್ಕಾರದ ಜಂಟಿ ಸಹಭಾಗಿತ್ವದಲ್ಲೇ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ದಿಲ್ಲಿಯಲ್ಲಿ ಎಲ್ಲರಿಗೂ ಕೊರೊನಾ ಪರೀಕ್ಷೆ - ಸರ್ವಪಕ್ಷ ಸಭೆಯಲ್ಲಿ ಅಮಿತ್‌ ಶಾ ಭರವಸೆ

ದೆಹಲಿಯಲ್ಲಿ ಕೊರೊನಾ ವೈರಸ್ ಹಾವಳಿಯನ್ನು ತಡೆಗಟ್ಟಲು ಸಾಧ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದ ಅಮಿತ್ ಶಾ, ಈ ನಿಟ್ಟಿನಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಮಾಹಿತಿ ನೀಡಿದರು.



ದೇಶ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಈ ಎಲ್ಲಾ ನಕಾರಾತ್ಮಕ ಅಂಶಗಳಿಂದ ದೇಶ ಯಶಸ್ವಿಯಾಗಿ ಹೊರಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ