ಆ್ಯಪ್ನಗರ

ಪೊಲೀಸರಿಗೆ ಕೊರೊನಾ ಸೋಂಕು: ಎರಡನೇ ಸಾಲಿನ ಭದ್ರತೆಗೆ ಸಿದ್ಧವಾಗುವಂತೆ ರಾಜ್ಯಗಳಿಗೆ ಸೂಚನೆ!

ದೇಶದ ಎಲ್ಲಾ ರಾಜ್ಯಗಳ ಪೊಲೀಸ್ ಇಲಾಖೆ ಮತ್ತು ಅರೆಸೇನಾಪಡೆ ಸಿಬ್ಬಂದಿಯಲ್ಲಿ ಮಾರಕ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಎರಡನೇ ಸಾಲಿನ ಭದ್ರತೆಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

Vijaya Karnataka Web 3 May 2020, 8:12 pm
ನವದೆಹಲಿ: ದೇಶದಲ್ಲಿ ಪೊಲೀಸ್ ಮತ್ತು ಅರೆಸೇನಾಪಡೆಗಳ ಸಿಬ್ಬಂದಿಯಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎರಡನಾ ಸಾಲಿನ ಭದ್ರತಾ ವ್ಯವಸ್ಥೆಗೆ ಸಜ್ಜಾಗುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
Vijaya Karnataka Web Police
ಸಂಗ್ರಹ ಚಿತ್ರ


ಸಿಆರ್‌ಪಿಎಫ್ ಸಿಬ್ಬಂದಿಯಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದು, ಈಗಾಗಲೇ ನವದೆಹಲಿಯಲ್ಲಿರುವ ಸಿಆರ್‌ಪಿಎಫ್ ಪ್ರಧಾನ ಕಚೇರಿಯನ್ನು ಮುಚ್ಚಲಾಗಿದೆ.

ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು: ಸಿಆರ್‌ಪಿಎಫ್ ಪ್ರಧಾನ ಕಚೇರಿ ಬಂದ್!

ಅಲ್ಲದೇ ವಿವಿಧ ರಾಜ್ಯಗಳಲ್ಲಿ ಪೊಲೀಸರಲ್ಲೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಎರಡನೇ ಸಾಲಿನ ಭಧ್ರತಾ ವ್ಯವಸ್ಥೆಗಳನ್ನು ಮಾಡಿಟ್ಟುಕೊಳ್ಳುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ.

55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಯನ್ನು ಕೊರೊನಾ ವೈರಸ್ ಸಂಬಂಧಿತ ಕರ್ತವ್ಯಕ್ಕೆ ನಿಯೋಜನೆ ಮಾಡದಂತೆ ಈಗಾಗಲೇ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಇದೀಗ ಪೊಲೀಸ್ ಸಿಬ್ಬಂದಿಯ ಆರೋಗ್ಯದ ಮೇಲೆ ತೀವ್ರ ನಿಗಾ ಇಡುವಂತೆ ತಿಳಿಸಲಾಗಿದೆ.

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ದೇಶದ ಎಲ್ಲಾ ರಾಜ್ಯಗಳ ಪೊಲೀಸ್ ಇಲಾಖೆ, ತಮ್ಮ ಸಿಬ್ಬಂದಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸ್ಥಿರವಾಗಿರುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಗೃಹ ಇಲಾಖೆ ಸೂಚಿಸಿದೆ.

ಹೊಸದಿಲ್ಲಿ: 122 ಸಿಆರ್‌ಪಿಎಫ್‌ ಯೋಧರಿಗೆ ಕೊರೊನಾ ಪಾಸಿಟಿವ್‌, ಇಡೀ ಶಿಬಿರ ಸೀಲ್‌ ಡೌನ್‌

ತಮಿಳುನಾಡಿನಲ್ಲಿ ಶೇ.25 ರಷ್ಟು ಪೊಲೀಸ್ ಸಿಬ್ಬಂದಿ ಕಡ್ಡಾಯವಾಗಿ ಮನೆಯಲ್ಲಿ ಇರಬೇಕು ಎಂದು ಆ ರಾಜ್ಯದ ಡಿಜಿಪಿ ಈಗಾಗಲೇ ಆದೇಶ ಹೊರಡಿಸಿದ್ದು, ಉಳಿದ ರಾಜ್ಯಗಳಲ್ಲೂ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂಬುದು ವಿಶೇಷ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ