ಆ್ಯಪ್ನಗರ

ಧಾರ್ಮಿಕ ಸ್ವಾತಂತ್ರ್ಯಕ್ಕೆ ಥಂಬ್ಸ್ ಅಪ್, ಸಿಎಎ ಬಗ್ಗೆ ಟ್ರಂಪ್ ಗಪ್‌ ಚುಪ್‌

ಕೊನೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಬಾಯಿ ಬಿಟ್ಟಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಟ್ರಂಪ್‌ ಧಾರ್ಮಿಕ ಸ್ವಾತಂತ್ರ್ಯದ ವಿಚಾರವಾಗಿ ಪ್ರಧಾನಿ ಮೋದಿ ಜೊತೆ ಮಾತನಾಡಿದ್ದೇನೆ. ಭಾರತೀಯರಿಗೆ ಧಾರ್ಮಿಕ ಸ್ವಾತಂತ್ರ್ಯ ಇರಬೇಕು ಎಂಬ ನಿಲುವನ್ನು ಮೋದಿ ಹೊಂದಿದ್ದಾರೆ ಎಂದು ಹೇಳಿದರು.

Vijaya Karnataka Web 25 Feb 2020, 6:47 pm
ಹೊಸದಿಲ್ಲಿ: ಕೊನೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಬಾಯಿ ಬಿಟ್ಟಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಟ್ರಂಪ್‌ ಧಾರ್ಮಿಕ ಸ್ವಾತಂತ್ರ್ಯದ ವಿಚಾರವಾಗಿ ಪ್ರಧಾನಿ ಮೋದಿ ಜೊತೆ ಮಾತನಾಡಿದ್ದೇನೆ. ಭಾರತೀಯರಿಗೆ ಧಾರ್ಮಿಕ ಸ್ವಾತಂತ್ರ್ಯ ಇರಬೇಕು ಎಂಬ ನಿಲುವನ್ನು ಮೋದಿ ಹೊಂದಿದ್ದಾರೆ ಎಂದು ಹೇಳಿದರು.
Vijaya Karnataka Web TRUMP MODI


ದೆಹಲಿಯಲ್ಲಿ ನಡೆಯುತ್ತಿರುವ ಸಿಎಎ ಹಿಂಸಾಚಾರದ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಟ್ರಂಪ್‌, ಭಾರತೀಯರಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಬೇಕೆಂಬ ನಿಲುವನ್ನು ಪ್ರಧಾನಿ ಹೊಂದಿದ್ದಾರೆ. ಈ ಬಗ್ಗೆ ಅವರೊಂದಿಗೆ ಚರ್ಚಿಸಲಾಗಿದೆ. ಇದಕ್ಕಾಗಿ ಅವರು ಕಠಿಣ ಶ್ರಮ ಪಡುತ್ತಿದ್ದಾರೆ. ಆದರೆ, ಸಿಎಎ ಬಗ್ಗೆ ಯಾವುದೇ ಮಾತುಕತೆಯಾಗಿಲ್ಲ ಎಂದು ಹೇಳಿದರು.


ಭಾರತ, ಅಮೆರಿಕ ಬಿಗ್‌ ಡೀಲ್‌, ರಕ್ಷಣಾ, ಇಂಧನ ಕ್ಷೇತ್ರದಲ್ಲಿ 3 ಬಿಲಿಯನ್‌ ಅಮೆರಿಕನ್‌ ಡಾಲರ್ ಒಪ್ಪಂದ: ಮೋದಿ-ಟ್ರಂಪ್‌ ಜಂಟಿ ಹೇಳಿಕೆ

ಇನ್ನು, ದೆಹಲಿ ಸಿಎಎ ಘರ್ಷಣೆ ಭಾರತಕ್ಕೆ ಬಿಟ್ಟಿದ್ದು, ದೆಹಲಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮಾಹಿತಿ ಬಂದಿದೆ. ಆದರೆ, ಘರ್ಷಣೆ ಬಗ್ಗೆ ಚರ್ಚಿಸಿಲ್ಲ ಎಂದು ಟ್ರಂಪ್‌ ಹೇಳಿದರು. ಇದರ ಜೊತೆ ಭಯೋತ್ಪಾದನೆಯ ವಿರುದ್ಧ ಅಮೆರಿಕಾ ಮತ್ತು ಭಾರತ ಜಂಟಿಯಾಗಿ ಹೋರಾಟ ಮಾಡುತ್ತವೆ ಎಂದು ತಿಳಿಸಿದರು.

ಟ್ರಂಪ್‌ LIVE: ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸುದ್ದಿಗೋಷ್ಠಿ

ಕಾಶ್ಮೀರ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಟ್ರಂಪ್‌, ಪಾಕಿಸ್ತಾನ ಮತ್ತು ಭಾರತದ ಮಧ್ಯೆ ಕಾಶ್ಮೀರ ವಿವಾದ ಬಹಳ ದಿನಗಳಿಂದ ನಡೆಯುತ್ತಿದೆ. ಅವರೇ ಅದನ್ನು ಸರಿಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅಗತ್ಯವಿದ್ದರೆ ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸಲು ಸಿದ್ಧವಾಗಿದ್ದೇವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ