ಆ್ಯಪ್ನಗರ

ಉ.ಪ್ರ ಚುನಾವಣೆ: ವಾರಾಣಸಿಯಲ್ಲಿ ಮೋದಿಗೆ ಭವ್ಯ ಸ್ವಾಗತ

ಚುನಾವಣೆ ಪ್ರಚಾರಾರ್ಥ ವಾರಾಣಸಿಗೆ ಆಗಮಿಸಿರುವ ನರೇಂದ್ರ ಮೋದಿಯನ್ನು ಸ್ವಾಗತಿಸಲು ಜನರು ಕಿಕ್ಕಿರಿದು ಸೇರಿದ್ದರು.

ಟೈಮ್ಸ್ ಆಫ್ ಇಂಡಿಯಾ 4 Mar 2017, 3:29 pm
ವಾರಣಾಸಿ: ಉತ್ತರ ಪ್ರದೇಶದಲ್ಲಿ ಚುನಾವಣೆಯ ಕಾವು ಜೋರಾಗಿಯೇ ನಡೆದಿದೆ. ಶನಿವಾರ ಉತ್ತರ ಪ್ರದೇಶದಲ್ಲಿ ಆರನೇ ಹಂತದ ಚುನಾವಣೆ ಆರಂಭವಾದ ಹಿನ್ನೆಯಲ್ಲಿ ಚುನಾವಣೆ ಪ್ರಚಾರಾರ್ಥ ವಾರಾಣಸಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಜನರು ಕಿಕ್ಕಿರಿದು ಸೇರಿದ್ದರು.
Vijaya Karnataka Web uttar pradesh assembly polls 2017 hundreds turn out to cheer narendra modi in varanasi roadshow
ಉ.ಪ್ರ ಚುನಾವಣೆ: ವಾರಾಣಸಿಯಲ್ಲಿ ಮೋದಿಗೆ ಭವ್ಯ ಸ್ವಾಗತ


ಮೋದಿ ಅವರು ಮದನ್ ಮೋಹನ್ ಮಾಳವೀಯ ಅವರ ಪ್ರತಿಭೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ಆರಂಭಿಸಿದ ವೇಳೆ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರು ಹರ್ ಹರ್ ಮೋದಿ, ಘರ್ ಫರ್ ಮೋದಿ ಎಂಬ ಘೋಷಣೆಗಳನ್ನು ಕೂಗಿದರು. ಇದಾದ ಬಳಿಕ ಪ್ರಸಿದ್ಧ ಕಾಲಭೈರವೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ವಾರಾಣಾಸಿಯಲ್ಲಿ ಮೋದಿ, ರಾಹುಲ್‌, ಅಖಿಲೇಶ್‌

ವಾರಾಣಸಿಯ ಎಲ್ಲೆಡೆ ವ್ಯಾಪಕ ಪೊಲೀಸ್ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಅರೆ ಸೇನಾ ಪಡೆಗಳನ್ನೂ ಅಲ್ಲಲ್ಲಿ ನಿಯೋಜಿಸಲಾಗಿದೆ. ತೆರೆದ ವಾಹನದಲ್ಲಿ ರೋಡ್ ಶೋ ನಡೆಸುತ್ತಿರುವ ಪ್ರಧಾನಿ, ಪಕ್ಷದ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ದೊರಕಿದೆ. ಪ್ರಧಾನಿಗೆ ಅಮಿತ್ ಶಾ ಸಾಥ್ ನೀಡಿದ್ದಾರೆ.

ಮೋದಿ ಅವರು ಮೂರು ದಿನಗಳ ಕಾಲ ವಾರಾಣಸಿ ಕ್ಷೇತ್ರದಲ್ಲೇ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇದಕ್ಕೆ ಪೈಪೋಟಿ ಎಂಬಂತೆ ಎಸ್‌ಪಿ- ಕಾಂಗ್ರೆಸ್‌ ಮತ್ತು ಬಿಎಸ್‌ಪಿಯ ಮಾಯಾವತಿ ಅವರೂ ಭರ್ಜರಿ ಪ್ರಚಾರಗಳನ್ನು ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ