ಆ್ಯಪ್ನಗರ

ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ಚುನಾವಣಾ ತಯಾರಿ, ಆಕರ್ಷಕ ಕ್ಯಾಲೆಂಡರ್‌ ಬಿಡುಗಡೆ

ಉತ್ತರ ಪ್ರದೇಶ ರಾಜ್ಯದಲ್ಲಿ ಪಕ್ಷ ಬಲಪಡಿಸುವ ಜವಾಬ್ದಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿರುಸಿನ ಪ್ರಚಾರಕ್ಕೆ ಅಣಿಯಾಗಿರುವುದು ಕ್ಯಾಲೆಂಡರ್‌ನಲ್ಲಿ ದಾಖಲಾಗಿದೆ.

Agencies 21 Jan 2021, 7:25 pm
ಲಖನೌ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಈಗಿನಿಂದಲೇ ಸಿದ್ಧತೆ ಶುರು ಮಾಡಿದೆ. ರಾಜ್ಯದಲ್ಲಿ ಪಕ್ಷ ಬಲಪಡಿಸುವ ಜವಾಬ್ದಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿರುಸಿನ ಪ್ರಚಾರಕ್ಕೆ ಅಣಿಯಾಗಿದ್ದು, ಅವರ ಪ್ರವಾಸ ಮತ್ತಿತ್ತರ ವಿವರ ಒಳಗೊಂಡ ಆಕರ್ಷಕ ಕ್ಯಾಲೆಂಡರ್‌ ಅನ್ನು ವಿತರಣೆ ಮಾಡಲಾಗುತ್ತಿದೆ.
Vijaya Karnataka Web Priyanka-Gandhi


"ಜನ ಸಂಪರ್ಕಕ್ಕೆ ಅನುಕೂಲವಾಗುವ ದಿಸೆಯಲ್ಲಿ ಕ್ಯಾಲೆಂಡರ್‌ ಸಿದ್ಧಪಡಿಸಲಾಗಿದೆ. ಪಕ್ಷದ ಪ್ರಮುಖ ನಾಯಕರು, ಅದರಲ್ಲೂ ವಿಶೇಷವಾಗಿ ರಾಜ್ಯ ನಾಯಕರ ಜನ ಸಂಪರ್ಕ ಕಾರ್ಯಕ್ರಮಗಳ ವಿವರಗಳನ್ನು ಇದರಲ್ಲಿ ನೀಡಲಾಗಿದೆ. ನಾಯಕರ ಚಿತ್ರ ಸಹಿತ ಆಕರ್ಷಕ ವಿವರಗಳನ್ನು ಮುದ್ರಿಸಲಾಗಿದೆ’’ ಎಂದು ಪಕ್ಷದ ರಾಜ್ಯ ಮಾಧ್ಯಮ ಉಸ್ತುವಾರಿ ಲಾಲನ್‌ ಕುಮಾರ್‌ ತಿಳಿಸಿದ್ದಾರೆ.

ಈಗಾಗಲೇ 10 ಲಕ್ಷ ಕ್ಯಾಲೆಂಡರ್‌ಗಳನ್ನು ರಾಜ್ಯದಲ್ಲಿ ಹಂಚಿಕೆ ಮಾಡಲಾಗಿದೆ. ವಾರ್ಡ್‌ ಮಟ್ಟದಿಂದ ಅವುಗಳ ವಿತರಣೆ ನಡೆಯುತ್ತಿದೆ. ಜನ ಸಂಪರ್ಕ ಕಾರ್ಯಕ್ರಮಗಳಲ್ಲಿ ಪ್ರಿಯಾಂಕಾ ವಾದ್ರಾ ಪಾಲ್ಗೊಂಡ ಚಿತ್ರಗಳನ್ನು ಕ್ಯಾಲೆಂಡರ್‌ನಲ್ಲಿ ಮುದ್ರಿಸಲಾಗಿದೆ ಎಂದು ಲಾಲನ್‌ ಹೇಳಿದರು. 2022ರ ಆರಂಭದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ