ಆ್ಯಪ್ನಗರ

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸ್ಥಳ ಗುರುತಿಸಿದ ಯೋಗಿ ನೇತೃತ್ವದ ಯುಪಿ ಸರಕಾರ

ಬಾಬ್ರಿ ಮಸೀದಿ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ತಯಾರಿ ನಡೆಯುತ್ತಿರುವ ಬೆನ್ನಲ್ಲೇ, ಮಸೀದಿ ನಿರ್ಮಾಣ ಮಾಡಲು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರಕಾರ ಐದು ಸ್ಥಳಗಳನ್ನು ಗುರುತಿಸಿದೆ.

Vijaya Karnataka Web 31 Dec 2019, 12:54 pm
ಲಕ್ನೋ: ಇತ್ತೀಚೆಗೆ ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಮಸೀದಿ ನಿರ್ಮಾಣ ಮಾಡಲು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರಕಾರ ಐದು ಸ್ಥಳಗಳನ್ನು ಗುರುತಿಸಿದೆ.
Vijaya Karnataka Web mosque in ayodhya


ಬಾಬ್ರಿ ಮಸೀದಿ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮಾಡಿ, ಮಸೀದಿ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಐದು ಎಕರೆ ಸ್ಥಳ ನೀಡಬೇಕೆಂದು ಸುಪ್ರೀಂಕೋರ್ಟ್ ನವೆಂಬರ್ 9 ರಂದು ನೀಡಿದ ತನ್ನ ಐತಿಹಾಸಿಕ ತೀರ್ಪು ನೀಡಿತ್ತು.

ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸರಕಾರ ಮಿರ್ಜಾಪುರ, ಶಂಶುದ್ದೀನ್ ಪುರ ಮತ್ತು ಚಾಂದ್ ಪುರ ನಲ್ಲಿ ಐದು ಸ್ಥಳಗಳನ್ನು ಗುರುತಿಸಿದ್ದು, ಈ ಪ್ರದೇಶ ಪವಿತ್ರ ಸ್ಥಳ ಎಂದು ಗುರುತಿಸಿರುವ ಪಂಚ್ ಕೋಶಿ ಪರಿಕ್ರಮದಿಂದ ಸುಮಾರು 15 ಕಿಲೋ ಮೀಟರ್ ದೂರದಲ್ಲಿದೆ ಎಂದು ವರದಿ ತಿಳಿಸಿದೆ. ಜೊತೆಗೆ ಸುಪ್ರೀಂ ಆದೇಶದಂತೆ ಸುನ್ನಿ ವಕ್ಫ್ ಬೋರ್ಡ್ ಟ್ರಸ್ಟಿಗಳು ಈ ಸ್ಥಳವನ್ನು ಪರಿಶೀಲಿಸಿ ಮಸೀದಿ ನಿರ್ಮಾಣಕ್ಕೆ ಯಾವ ಸ್ಥಳ ಸೂಕ್ತ ಎಂಬುದನ್ನು ತಿಳಿಸಲು ಉತ್ತರಪ್ರದೇಶ ಸರಕಾರ ಸೂಚನೆ ನೀಡಿದೆ ಎನ್ನಲಾಗಿದೆ.

ಅಯೋಧ್ಯೆ ತೀರ್ಪು ಪ್ರಶ್ನಿಸಿ ಸುಪ್ರೀಂನಲ್ಲಿ ಕ್ಯುರೆಟೀವ್‌ ಅರ್ಜಿ, ಮಂಗಳೂರಿನಲ್ಲಿ ಬೈಠಕ್‌

ಅಯೋಧ್ಯೆ-ಬಾಬ್ರಿ ಮಸೀದಿ ಕುರಿತು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧಸಲ್ಲಿಸಲಾಗಿದ್ದ 18 ಅರ್ಜಿಗಳನ್ನು ಡಿಸೆಂಬರ್ 12 ರಂದು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ