ಆ್ಯಪ್ನಗರ

ಯುಪಿಯಲ್ಲಿ ಪೌರತ್ವದ ಕಿಚ್ಚಿಗೆ 19 ಬಲಿ: ಇಂಟರ್‌ನೆಟ್ ಬಂದ್, ಭದ್ರತೆಗಾಗಿ ಡ್ರೋಣ್ ಹದ್ದಿನ ಕಣ್ಣು

ಉತ್ತರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂ ತಾಳಿದ್ದು, 21 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಬಂದ್ ಮಾಡಲಾಗಿದೆ. ಭದ್ರತೆಗಾಗಿ ಡ್ರೋಣ್ ಬಳಸಲಾಗಿದೆ.

Vijaya Karnataka Web 27 Dec 2019, 1:58 pm
ಲಕ್ನೋ: ಉತ್ತರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿದೆ. ಪ್ರತಿಭಟನೆಯಲ್ಲಿ ಸುಮಾರು 19 ಜನ ಮೃತಪಟ್ಟಿದ್ದಾರೆ. ನೂರಾರು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಯುಪಿ ಸರಕಾರ 144 ಸೆಕ್ಷನ್ ಜಾರಿ ಮಾಡಿದ್ದು, ಸುಮಾರು 21 ಜಿಲ್ಲೆಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಿದೆ.
Vijaya Karnataka Web Lucknow


ಹೆಚ್ಚು ಹಿಂಸಾತ್ಮಕ ಪ್ರತಿಭಟನೆಗಳು ನಡೆದಿರುವ ಬಿಜ್ನೋರ್, ಬುಲಂದ್‌ಶಹರ್, ಮುಝಫ್ಫರ್‌ನಗರ, ಮೀರತ್, ಆಗ್ರಾ, ಫಿರೋಝಾಬಾದ್, ಸಂಭಾಲ್, ಅಲಿಗಢ, ಗಾಝಿಯಾಬಾದ್, ರಾಂಪುರ್, ಸೀತಾಪುರ ಹಾಗೂ ಕಾನ್ಪುರ ಜಿಲ್ಲೆಗಳಲ್ಲಿ ಇಂಟರ್ ನೆಟ್ ಸಂಪೂರ್ಣ ಬಂದ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಇದರ ಜೊತೆಗೆ ಉತ್ತರ ಪ್ರದೇಶದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಲಖನೌದಲ್ಲಿ ಅರೆಸೇನಾ ಪಡೆ ನಿಯೋಜಿಸಲಾಗಿದೆ. ಇಂದು ಶುಕ್ರವಾರವಾಗಿರುವುದಿಂದ ಮಸೀದಿಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ತುರ್ತು ಪ್ರಹಾರ ದಳ, ಅಶ್ರುವಾಯು ದಳಗಳನ್ನು ನಿಯೋಜಿಸಲಾಗಿದೆ.

ಸಿಎಎ, ಎನ್‌ಆರ್‌ಸಿಗೆ ವಿರೋಧ; ಕಾಂಗ್ರೆಸ್‌ನಿಂದ ಡಿ. 28 ಕ್ಕೆ ದೇಶಾದ್ಯಂತ ಪ್ರತಿಭಟನೆ

15 ಸಾವಿರಕ್ಕೂ ಅಧಿಕ ಸೈನಿಕರು, 20 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಇದರ ಜೊತೆಗೆ ಡ್ರೋಣ್ ಕ್ಯಾಮರಾಗಳನ್ನೂ ಕೂಡ ಬಳಸಲಾಗುತ್ತಿದೆ. ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದರೆ ಆಸ್ತಿ ಮುಟ್ಟುಗೋಲು ಮಾಡಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್ ಮತ್ತೆ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಈ ಆಸ್ತಿ ಹಾನಿಗೆ ಸಂಬಂಧಿಸಿದಂತೆ ಯೋಗಿ ಸರಕಾರ ಸುಮಾರು 500ಕ್ಕೂ ಹೆಚ್ಚು ಮಂದಿಗೆ ನೋಟಿಸ್ ನೀಡಿದೆ.

‘ಕಾಶ್ಮೀರವನ್ನೇ ಬಿಟ್ಟಿಲ್ಲ, ಮಂಗಳೂರನ್ನು ಬಿಡ್ತೀವಾ’ ! ಗರಂ ಆದ್ರು ಈಶ್ವರಪ್ಪ

ಕಳೆದವಾರ ರಾಜಧಾನಿ ಲಕ್ನೋದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತೀವ್ರ ಘರ್ಷಣೆ ನಡೆದಿತ್ತು. ಆದರೂ ಇಂಟರ್‌ನೆಟ್ ಸಂಪರ್ಕವನ್ನು ಕಡಿತಗೊಳಿಸಿರಲಿಲ್ಲ. ಹಿಂಸಾತ್ಮಕ ಹೋರಾಟ ಹೆಚ್ಚಾದುದರಿಂದ ಈಗ ಇಂಟರ್‌ನೆಟ್ ಕಟ್ ಮಾಡಲಾಗಿದೆ. ಶನಿವಾರದಿಂದ ಇಂಟರ್ ನೆಟ್ ಸೇವೆ ಮತ್ತೆ ಆರಂಭವಾಗಲಿದೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ