ಆ್ಯಪ್ನಗರ

ಮೋದಿ ಅವರನ್ನು ರಕ್ಷಣೆ ಮಾಡಿದ್ದು ಆಡ್ವಾಣಿ ಎಂದ ಯಶವಂತ ಸಿನ್ಹಾ

2002ರ ಗುಜರಾತ್‌ ಗಲಭೆ ಸಂದರ್ಭದಲ್ಲಿಯೇ ಗೋವಾದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಂದಿನ ಪ್ರಧಾನಿ ವಾಜಪೇಯಿ, ಮೋದಿ ರಾಜೀನಾಮೆ ನೀಡಬೇಕೆಂದು ಸ್ಪಷ್ಟವಾಗಿ ಹೇಳಿದ್ದರು.

Vijaya Karnataka 11 May 2019, 5:00 am
ಭೋಪಾಲ್‌: ಗೋಧ್ರಾ ಘಟನೆ ನಂತರದ ಹಿಂಸಾಚಾರದ ಕಾರಣದಿಂದ ಮುಖ್ಯಮಂತ್ರಿ ಪದವಿ ಕಳೆದುಕೊಳ್ಳುವ ಅಪಾಯಕ್ಕೆ ಸಿಲುಕಿದ್ದ ನರೇಂದ್ರ ಮೋದಿ ಅವರನ್ನು ರಕ್ಷಣೆ ಮಾಡಿದ್ದು ಎಲ್‌.ಕೆ.ಆಡ್ವಾಣಿ ಅವರು ಎಂದು ಬಿಜೆಪಿ ಮಾಜಿ ನಾಯಕ ಯಶವಂತ ಸಿನ್ಹಾ ಹೇಳಿದ್ದಾರೆ.
Vijaya Karnataka Web vajpayee wanted to sack modi in 2002 advani stalled it yashwant sinha
ಮೋದಿ ಅವರನ್ನು ರಕ್ಷಣೆ ಮಾಡಿದ್ದು ಆಡ್ವಾಣಿ ಎಂದ ಯಶವಂತ ಸಿನ್ಹಾ


ಮೋದಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದಲ್ಲಿ ವ್ಯಾಪಕ ಹಿಂಸಾಚಾರ ನಡೆಯಿತು. ಇದರಿಂದ ಆಘಾತಕ್ಕೊಳಗಾದ ಅಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ಮೋದಿಯವರ ರಾಜೀನಾಮೆ ಬಯಸಿದ್ದರು. ಆದರೆ ಅಂದಿನ ಕೇಂದ್ರ ಗೃಹ ಸಚಿವರಾಗಿದ್ದ ಆಡ್ವಾಣಿ ಅವರು ಮೋದಿ ಪರ ವಕಾಲತ್ತು ವಹಿಸಿದರು. ಅವರನ್ನು ವಜಾಗೊಳಿಸಿದರೆ ತಾವು ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿ ರಕ್ಷಿಸಿದರು ಎಂದು ಸಿನ್ಹಾ ಸುದ್ದಿಗಾರರಿಗೆ ತಿಳಿಸಿದರು.

''2002ರ ಗುಜರಾತ್‌ ಗಲಭೆ ಸಂದರ್ಭದಲ್ಲಿಯೇ ಗೋವಾದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಂದಿನ ಪ್ರಧಾನಿ ವಾಜಪೇಯಿ, ಮೋದಿ ರಾಜೀನಾಮೆ ನೀಡಬೇಕೆಂದು ಸ್ಪಷ್ಟವಾಗಿ ಹೇಳಿದ್ದರು. ಒಂದು ವೇಳೆ ಅವರು ರಾಜೀನಾಮೆ ನೀಡದೇ ಹೋದರೆ ಗುಜರಾತ್‌ ಸರಕಾರವನ್ನೇ ವಜಾಗೊಳಿಸಿದರಾಯಿತು ಎನ್ನುವ ನಿರ್ಧಾರಕ್ಕೆ ಬಂದಿದ್ದರು. ಆದರೆ ಇದೆಲ್ಲವನ್ನೂ ತಡೆದು ಮೋದಿ ರಕ್ಷಣೆ ಮಾಡಿದ್ದು ಆಡ್ವಾಣಿ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ