ಆ್ಯಪ್ನಗರ

370ನೇ ವಿಧಿ ರದ್ದುಪಡಿಸಲು ವಿಶ್ವ ಹಿಂದೂ ಪರಿಷತ್‌ ಆಗ್ರಹ

ಆದಷ್ಟು ತ್ವರಿತವಾಗಿ ರಾಜ್ಯದಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಪ್ರಕ್ರಿಯೆ ಆರಂಭಿಸಬೇಕು. ವಿವಿಧ ಕಾರಣಗಳಿಂದ ರಾಜ್ಯ ತೊರೆದಿರುವ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಬೇಕು ಎಂದೂ ವಿಶ್ವ ಹಿಂದೂ ಪರಿಷತ್‌ ಆಗ್ರಹಿಸಿದೆ.

PTI 1 Jul 2019, 5:00 am
ಜಮ್ಮು: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ಹಾಗೂ ರಾಜ್ಯದ ಕಾಯಂ ನಿವಾಸಿಗಳನ್ನು ವ್ಯಾಖ್ಯಾನಿಸಿ ಆಸ್ತಿ ಹಕ್ಕು ನೀಡುವ 35-ಎ ವಿಧಿಗಳನ್ನು ಆದಷ್ಟು ಶೀಘ್ರ ರದ್ದುಪಡಿಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಕೇಂದ್ರ ಸರಕಾರವನ್ನು ಆಗ್ರಹಿಸಿದೆ.
Vijaya Karnataka Web vinod

ಜಮ್ಮುವಿನಲ್ಲಿ ಎರಡು ದಿನಗಳ ಕಾಲ ನಡೆದ ವಿಎಚ್‌ಪಿಯ ಕೇಂದ್ರೀಯ ನಿರ್ವಹಣಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜತೆಗೆ, ಆದಷ್ಟು ತ್ವರಿತವಾಗಿ ರಾಜ್ಯದಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಪ್ರಕ್ರಿಯೆ ಆರಂಭಿಸಬೇಕು. ವಿವಿಧ ಕಾರಣಗಳಿಂದ ರಾಜ್ಯ ತೊರೆದಿರುವ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಬೇಕು. ರಾಜ್ಯದಿಂದ ರೋಹಿಂಗ್ಯಾಗಳು ಹಾಗೂ ಬಾಂಗ್ಲಾದೇಶಿ ಮುಸ್ಲಿಮರನ್ನು ಹೊರಹಾಕಬೇಕು ಎಂದೂ ಸಭೆ ಆಗ್ರಹಿಸಿದೆ.

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಶಾರದಾ ಪೀಠಕ್ಕೆ ಯಾತ್ರಾರ್ಥಿಗಳು ತೆರಳಲು ಅವಕಾಶ ಕಲ್ಪಿಸಬೇಕು. ಲಡಾಖ್‌ ಮೂಲಕ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳಲು ಅನುಮತಿ ನೀಡಬೇಕು ಎಂದೂ ಸಭೆ ಒತ್ತಾಯಿಸಿದೆ.

ವಿಶ್ವ ಹಿಂದೂ ಪರಿಷತ್‌ನ ಕೇಂದ್ರೀಯ ನಿರ್ವಹಣಾ ಮಂಡಳಿ ಸಭೆ ಜಮ್ಮುವಿನಲ್ಲಿ ನಡೆದದ್ದು ಇದೇ ಮೊದಲು. ಮಾತ್ರವಲ್ಲ, ಒಂದೇ ರಾಜ್ಯಕ್ಕೆ (ಜಮ್ಮು-ಕಾಶ್ಮೀರ) ಸಂಬಂಧಿಸಿದ ನಿರ್ಣಯಗಳನ್ನು ಕೈಗೊಂಡಿರುವುದೂ ಸಂಘಟನೆ ಇತಿಹಾಸದಲ್ಲೇ ಇದು ಪ್ರಥಮ.

ಭಾನುವಾರ ಸಭೆ ಮುಕ್ತಾಯವಾದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ವಿಎಚ್‌ಪಿ ರಾಷ್ಟ್ರೀಯ ವಕ್ತಾರ ವಿನೋದ್‌ ಬನ್ಸಾಲ್‌ ಅವರು, ''ವಿಎಚ್‌ಪಿ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಸದಾಶಿವ ಕೋಕ್ಜೆ ಸೇರಿದಂತೆ 225 ಪದಾಧಿಕಾರಿಗಳು ಭಾಗವಹಿಸಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಗೋ ರಕ್ಷಣೆ, ಲವ್‌ ಜಿಹಾದ್‌, ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಸೂಕ್ತ ನಿರ್ವಹಣೆ ಇಲ್ಲದಿರುವುದು ಮೊದಲಾದ ಪ್ರಮುಖ ವಿಷಯಗಳ ಬಗ್ಗೆ ವಿವರವಾದ ಚರ್ಚೆ ನಡೆಸಲಾಯಿತು,'' ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ