ಆ್ಯಪ್ನಗರ

ಅಯೋಧ್ಯೆಯತ್ತ ಎಲ್ಲರ ಚಿತ್ತ: ರಾಮನಾಮ ಜಪದಲ್ಲಿ ಶಿವಸೇನೆ, ವಿಎಚ್‌ಪಿ, ಆರ್‌ಎಸ್‌ಎಸ್‌

ಆಯೋಧ್ಯೆಯಲ್ಲಿ ಕಾರ್ಯಕ್ರಮ ಸಂಘಟನೆಯಿಂದ ಬಿಜೆಪಿ ದೂರ ಉಳಿದಿತ್ತಾದರೂ, ಶಿವಸೇನೆ ಕಾರ್ಯಕ್ರಮಕ್ಕೆ ಮುಂದಾಗಿದ್ದರಿಂದ ವಿಎಚ್‌ಪಿ ಮತ್ತು ಆರ್‌ಎಸ್‌ಎಸ್‌ ಮೂಲಕ ಕಾರ್ಯಕ್ರಮ ಸಂಘಟಿಸಲು ಅಡಿಯಿರಿಸಿದೆ.

Vijaya Karnataka Web 22 Nov 2018, 5:18 pm
ಲಖನೌ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಮನಾಮ ಜಪದಲ್ಲಿ ಬಿಜೆಪಿ ತೊಡಗಿದ್ದು, ಅತ್ತ ಅಯೋಧ್ಯೆಯಲ್ಲಿ ವಿಶೇಷ ಕಾರ್ಯಕ್ರಮ ಸಂಘಟಿಸುವ ಮೂಲಕ ಶಿವಸೇನೆ ಮತ್ತು ವಿಶ್ವ ಹಿಂದು ಪರಿಷತ್ ಹೆಜ್ಜೆ ಇರಿಸಿದೆ.
Vijaya Karnataka Web Ram Bhumi


ಶಿವಸೇನೆ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶನಿವಾರ ಮತ್ತು ಭಾನುವಾರ ಅಯೋಧ್ಯೆಯಲ್ಲಿ ಸಾವಿರಾರು ಕಾರ್ಯಕರ್ತರನ್ನು ಸಂಘಟಿಸಿ ಬೃಹತ್ ಕಾರ್ಯಕ್ರಮ ಆಯೋಜನೆಗೆ ಮುಂದಾಗಿದ್ದರೆ, ವಿಎಚ್‌ಪಿ ಮತ್ತು ಆರ್‌ಎಸ್‌ಎಸ್‌ ಕೂಡ ತರಾತುರಿಯಲ್ಲಿ ಭಾನುವಾರ ಕಾರ್ಯಕ್ರಮ ಸಂಘಟಿಸುವುದಾಗಿ ಹೇಳಿವೆ.

ಆಯೋಧ್ಯೆಯಲ್ಲಿ ಕಾರ್ಯಕ್ರಮ ಸಂಘಟನೆಯಿಂದ ಬಿಜೆಪಿ ದೂರ ಉಳಿದಿತ್ತಾದರೂ, ಶಿವಸೇನೆ ಕಾರ್ಯಕ್ರಮಕ್ಕೆ ಮುಂದಾಗಿದ್ದರಿಂದ ವಿಎಚ್‌ಪಿ ಮತ್ತು ಆರ್‌ಎಸ್‌ಎಸ್‌ ಮೂಲಕ ಕಾರ್ಯಕ್ರಮ ಸಂಘಟಿಸಲು ಅಡಿಯಿರಿಸಿದೆ.

ಹೀಗಾಗಿ ಉಭಯ ಸಂಘಟನೆ ಮತ್ತು ಪಕ್ಷಗಳ ಸಾವಿರಾರು ಕಾರ್ಯಕರ್ತರು ಶನಿವಾರ ಮತ್ತು ಭಾನುವಾರ ಆಯೋಧ್ಯೆಯತ್ತ ಧಾವಿಸುತ್ತಿದ್ದಾರೆ.

1992ರ ನಂತರ ಇದೇ ಮೊದಲ ಬಾರಿಗೆ ಬೃಹತ್ ಕಾರ್ಯಕ್ರಮ ಸಂಘಟಿಸಲಾಗುತ್ತಿದ್ದು, ನೂರಾರು ಸಂಖ್ಯೆಯ ಸಂತರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಸಹಜವಾಗಿಯೇ ಎಲ್ಲರ ದೃಷ್ಟಿ ಅಯೋಧ್ಯೆಯತ್ತ ನೆಟ್ಟಿದ್ದು, ಭಾನುವಾರ ಏನಾಗಲಿದೆ ಎಂಬ ಕುತೂಹಲ ಸೃಷ್ಟಿಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ