ಆ್ಯಪ್ನಗರ

ದಿಲ್ಲಿ ಮೆಟ್ರೊ ನಿಲ್ದಾಣಕ್ಕೆ ವಿಶ್ವೇಶ್ವರಯ್ಯ ಹೆಸರು

ಕನ್ನಡದಲ್ಲೇ ಅಭಿನಂದಿಸಿದ ಅನಂತಕುಮಾರ್‌

Vijaya Karnataka 6 Aug 2018, 10:30 pm
ಹೊಸದಿಲ್ಲಿ: ನಗರದ ಮೋತಿಬಾಗ್‌ನ ಕರ್ನಾಟಕ ಸಂಘದ ಪಕ್ಕದಲ್ಲಿರುವ ಮೆಟ್ರೋ ನಿಲ್ದಾಣಕ್ಕೆ ಭಾರತರತ್ನ ಸರ್‌ ಎಂ.ವಿಶ್ವೇಶ್ವರಯ್ಯ ಅವರ ಹೆಸರನ್ನು ಇಟ್ಟಿರುವುದಕ್ಕೆ ಕೇಂದ್ರ ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್‌ ಅವರು ಕನ್ನಡಿಗರ ಪರವಾಗಿ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದರು.
Vijaya Karnataka Web ದಿಲ್ಲಿ ಮೆಟ್ರೊಗೆ ವಿಶ್ವೇಶ್ವರಯ್ಯ ಹೆಸರು
ದಿಲ್ಲಿ ಮೆಟ್ರೊಗೆ ವಿಶ್ವೇಶ್ವರಯ್ಯ ಹೆಸರು


ಹೊಸದಿಲ್ಲಿಯ ಬಾರಾ ಖಾಂಭಾ ಮೆಟ್ರೊ ನಿಲ್ದಾಣದಲ್ಲಿ ಸೋಮವಾರ ನಡೆದ ಸರ್‌ ಎಂ.ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೆಟ್ರೊ ರೈಲಿನ ಯೋಜನೆ ಸಾಕಾರಗೊಳ್ಳಲು ಸಹಕರಿಸಿದ ಜಪಾನ್‌ ರಾಯಭಾರಿ, ಕೇಂದ್ರ ನಗರಾಭಿವೃದ್ಧಿ ಸಚಿವ ಹರದೀಪ್‌ ಸಿಂಗ್‌ ಪುರಿ ಸೇರಿದಂತೆ ಪ್ರತಿಯೊಬ್ಬರನ್ನೂ ಅಭಿನಂದಿಸಿದರು.

ಮೆಟ್ರೊ ನಿಲ್ದಾಣಕ್ಕೆ ವಿಶ್ವೇಶ್ವರಯ್ಯ ಅವರ ಹೆಸರಿನ್ನಿಡುವಂತೆ ಈ ಹಿಂದೆ ಅನಂತಕುಮಾರ್‌ ಒತ್ತಾಯಿಸಿದ್ದರು. ಇದಕ್ಕೆ ಅಂದಿನ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು ಒಪ್ಪಿಗೆ ಸೂಚಿಸಿದ್ದರು. ಕಾರ್ಯಕ್ರಮದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸೇರಿದಂತೆ ಮೆಟ್ರೋ ದ ಉನ್ನತ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ