ಆ್ಯಪ್ನಗರ

ಪಶ್ಚಿಮ ಬಂಗಾಳದಲ್ಲಿ ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆ, ಸುಳಿವು ನೀಡಿದ ಆಯೋಗ

ಎಸ್‌ಪಿ ಮತ್ತು ಡಿಸಿಗಳ ಸಭೆ ನಡೆಸಿದ ಉಪ ಚುನಾವಣಾ ಆಯಕ್ತ ಸುದೀಪ್‌ ಜೈನ್, ಫೆಬ್ರವರಿ ಮಧ್ಯ ಭಾಗದಲ್ಲಿ ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಚುನಾವಣೆಯ ದಿನಾಂಕ ಘೋಷಿಸಬಹುದು ಎಂದು ಸುಳಿವು ನೀಡಿದ್ದಾರೆ.

Agencies 14 Jan 2021, 7:19 pm
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಿಗದಿತ ಸಮಯಕ್ಕೂ ಮುನ್ನವೇ ಚುನಾವಣೆ ನಡೆಯುವ ಸಾಧ್ಯತೆ ಇದೆ. ರಾಜ್ಯದಲ್ಲಿ ಪರೀಕ್ಷೆ ಸಮಯದಲ್ಲಿ ಚುನಾವಣೆ ನಡೆಯುವುದನ್ನು ತಪ್ಪಿಸಲು ಏಪ್ರಿಲ್‌ ಅಂತ್ಯಕ್ಕೆ ಪೂರ್ತಿ ಚುನಾವಣೆ ಪ್ರಕ್ರಿಯೆ ಮುಗಿಯಬಹುದು.
Vijaya Karnataka Web EVM


ಇದಲ್ಲದೆ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಹಿಂದೆಂದಿಗಿಂತಲೂ ಹೆಚ್ಚಿನ ಕೇಂದ್ರ ಪಡೆಗಳನ್ನು ರಾಜ್ಯಕ್ಕೆ ಕರೆಸಿಕೊಳ್ಳಬೇಕಾಗಬಹುದು ಎಂದು ಉಪ ಚುನಾವಣಾ ಆಯಕ್ತ ಸುದೀಪ್‌ ಜೈನ್‌ ಹೇಳಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಜತೆಗಿನ ಸಭೆಯಲ್ಲಿ ಅವರು ಈ ಅಭಿಪ್ರಾಯ ಹೊರಹಾಕಿದ್ದಾರೆ. ಫೆಬ್ರವರಿ ಮಧ್ಯ ಭಾಗದಲ್ಲಿ ಚುನಾವಣಾ ಆಯೋಗ ಚುನಾವಣೆಯ ದಿನಾಂಕ ಘೋಷಿಸಬಹುದು ಎಂದು ಅವರು ಸುಳಿವು ನೀಡಿದ್ದಾರೆ.

ಏಪ್ರಿಲ್‌ ಅಂತ್ಯಕ್ಕೆ ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೆರಿಯಲ್ಲಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಚುನಾವಣಾ ಆಯೋಗ ಉದ್ದೇಶಿಸಿದೆ. ಕಾರಣ ಮೇನಲ್ಲಿ ಸಿಬಿಎಸ್‌ಇ ಪರೀಕ್ಷೆ ಘೋಷಿಸಿದೆ. ಒಂದೊಮ್ಮೆ ಪಶ್ಚಿಮ ಬಂಗಾಳದಲ್ಲಿ ವಿವಿಧ ಹಂತಗಳ ಚುನಾವಣೆ ಘೋಷಿಸಬೇಕಾಗಿ ಬಂದಲ್ಲಿ ಆಯೋಗ ಫೆಬ್ರವರಿಯಲ್ಲಿಯೇ ಚುನಾವಣಾ ದಿನಾಂಕ ಘೋಷಿಸಬೇಕಾಗಿ ಬರಬಹುದು ಎಂದು ಆಯೋಗದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಡಿಎಸ್‌ಡಿಎ ಅಧ್ಯಕ್ಷ ಸ್ಥಾನದಿಂದ ಸುವೇಂದು ಅಧಿಕಾರಿ ತಂದೆ ಸಿಸಿರ್‌ ವಜಾ
2016ರಲ್ಲಿ ಪಶ್ಚಿಮ ಬಂಗಾಳದಲ್ಲಿ 6 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ಯು. ಏಪ್ರಿಲ್‌ 4 ರಂದು ಆರಂಭವಾಗಿದ್ದ ಮತದಾನ ಮೇ 5ರವರೆಗೆ ಮುಂದುವರಿದಿತ್ತು. 2011ರಲ್ಲಿಯೂ ಆರು ಹಂತಗಳಲ್ಲಿ ಮತದಾನ ನಡೆದಿತ್ತು.

ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಪ್ರತಿ ವಾರ ಚುನಾವಣಾ ಆಯೋಗಕ್ಕೆ ವರದಿ ಕಳುಹಿಸುವಂತೆ ಎಸ್‌ಪಿಗಳು ಹಾಗೂ ಕೊಲ್ಕತ್ತಾ ಪೊಲೀಸ್‌ ಆಯುಕ್ತರಿಗೆ ಉಪಚುನಾವಣಾ ಆಯುಕ್ತರು ಸೂಚನೆ ನೀಡಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆಗಳನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಅಗತ್ಯ ಬಿದ್ದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದೂ ವಾರ್ನ್‌ ಮಾಡಿದ್ದಾರೆ.

"ಜನರು ಭಯವಿಲ್ಲದೆ ತಮ್ಮ ಮನೆಗಳಿಂದ ಹೊರಬಂದು ಮತ್ತು ತಮ್ಮ ಮತದಾನವನ್ನು ಚಲಾಯಿಸಲು ಮುಕ್ತ ವಾತಾವರಣವನ್ನು ಸೃಷ್ಟಿಸಲು ಆಯೋಗ ನಿರ್ಧರಿಸಿದೆ,” ಎಂದು ಚುನಾವಣಾ ಅಧಿಕಾರಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಈ ಬಾರಿ ದೊಡ್ಡ ಪ್ರಮಾಣದ ಸೂಕ್ಷ್ಮ ಮತಗಟ್ಟೆಗಳ ಸಂಖ್ಯೆ ಇರಬಹುದು ಎಂದು ಸಭೆಯಲ್ಲಿದ್ದ ಅಧಿಕಾರಿಗಳು ಹೇಳಿದ್ದಾರೆ. ಜತೆಗೆ ಹೆಚ್ಚಿನ ಕೋವಿಡ್‌ ಪ್ರಕರಣಗಳಿರುವ ಪ್ರದೇಶದಲ್ಲಿ ಬಿಹಾರ ಮಾದರಿಯನ್ನು ಅನುಸರಿಸುವಂತೆಯೂ ಸುದೀಪ್‌ ಜೈನ್ ಸಲಹೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ