ಆ್ಯಪ್ನಗರ

ವಿತ್ತ ಸಚಿವರಾಗಿದ್ದ ಚಿದಂಬರಂ ಬಂಧನದ ಭೀತಿ ಎದುರಿಸುತ್ತಿರುವುದು ಏಕೆ? ಏನಿದು ಪ್ರಕರಣ?

ರಾಷ್ಟ್ರದ ತಿಜೋರಿಯನ್ನು ಕಾಯುವಂತಹ ಮಹೋನ್ನತ ಹುದ್ದೆಯನ್ನು ಅಲಂಕರಿಸಿದ್ದ ಪಿ. ಚಿದಂಬರಂ ಬಂಧನದ ಭೀತಿ ಎದುರಿಸುತ್ತಿರುವುದೇಕೆ? ಏನಿದು ಐಎನ್‌ಎಕ್ಸ್‌ ಮೀಡಿಯಾ ಮತ್ತು ಏರ್‌ಸೆಲ್‌-ಮ್ಯಾಕ್ಸಿಸ್‌ ಪ್ರಕರಣ?

Vijaya Karnataka Web 21 Aug 2019, 12:38 pm
ಹೊಸದಿಲ್ಲಿ: ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದಿಲ್ಲಿ ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದ್ದು, ಕಾಂಗ್ರೆಸ್‌ ಹಿರಿಯ ನಾಯಕ ಬಂಧನ ಭೀತಿ ಎದುರಿಸುತ್ತಿದ್ದಾರೆ. ಐಎನ್‌ಎಕ್ಸ್‌ ಪ್ರಕರಣದಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಎರಡೂ ಸಂಸ್ಥೆಗಳು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದು, ಎರಡೂ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನಿಗೆ ಚಿದಂಬರಂ ಅರ್ಜಿ ಸಲ್ಲಿಸಿದ್ದರು.
Vijaya Karnataka Web P Chidambaram


ಚಿದಂಬರಂ ಬಂಧನ ಸಾಧ್ಯತೆ: ಸಿಜೆಐ ನಿರ್ಧಾರದತ್ತ ಎಲ್ಲರ ಚಿತ್ತ

ಯುಪಿಎ-1 ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದಾಗ ಐಎನ್‌ಎಕ್ಸ್‌ ಮೀಡಿಯಾ ಮತ್ತು ಏರ್‌ಸೆಲ್‌-ಮ್ಯಾಕ್ಸಿಸ್‌ ಸಂಸ್ಥೆಗಳಿಗೆ ಲಾಭ ಮಾಡಿಕೊಡಲು ಲಂಚ ಪಡೆದ ಆರೋಪವನ್ನು ಚಿದಂಬರಂ ಎದುರಿಸುತ್ತಿದ್ದಾರೆ. 2007ರಲ್ಲಿ ಐಎನ್‌ಎಕ್ಸ್‌ ಮೀಡಿಯಾ ಸಂಸ್ಥೆಯು 305 ಕೋಟಿ ರೂ. ವಿದೇಶಿ ಹೂಡಿಕೆಯನ್ನು ಪಡೆಯಲು ಅಕ್ರಮವಾಗಿ ಅನುಮತಿ ನೀಡಲಾಗಿತ್ತು. ಇದಕ್ಕಾಗಿ ಸಂಸ್ಥೆಯು ನೀಡಿದ ಲಂಚವನ್ನು ನೇರವಾಗಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಒಡೆತನದ ಕಂಪನಿಗಳಿಗೆ ಸಂದಾಯ ಮಾಡಲಾಗಿತ್ತು. 3,500 ಕೋಟಿ ರೂ ಮೌಲ್ಯದ ಏರ್‌ಸೆಲ್‌-ಮ್ಯಾಕ್ಸಿಸ್‌ ಪ್ರಕರಣದಲ್ಲೂ ಚಿದಂಬರಂ ಕಾನೂನು ಗಾಳಿಗೆ ತೂರಿ ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟ ಆರೋಪ ಎದುರಿಸುತ್ತಿದ್ದಾರೆ.

ಪ್ರಧಾನಿ ಮೋದಿಯನ್ನು ಪಿ ಚಿದಂಬರಂ ಹೊಗಳಿದ್ದರ ಮರ್ಮವೇನು?

ಐಎನ್‌ಎಕ್ಸ್‌ ಮೀಡಿಯಾ ಹಗರಣ ನಡೆದುಬಂದ ಹಾದಿ: ಚಿದಂಬರಂ ತೊಂದರೆಗೆ ಸಿಕ್ಕಿಹಾಕಿಕೊಂಡಿದ್ದು ಹೇಗೆ?

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ