ಆ್ಯಪ್ನಗರ

ಪಾಕ್ ವಿಭಜನೆ ಕ್ರೆಡಿಟ್ ಇಂದಿರಾಗಾದ್ರೆ, ಮೋದಿಗೇಕಿಲ್ಲ ಏರ್‌ಸ್ಟೈಕ್ ಕ್ರೆಡಿಟ್: ರಾಜನಾಥ್ ಸಿಂಗ್

ಭಾರತ-ಪಾಕಿಸ್ತಾನ ನಡುವೆ ನಡೆದ ಯುದ್ಧದ ಬಳಿಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಂಸತ್ತಿನಲ್ಲಿ ಇಂದಿರಾ ಗಾಂಧಿ ಅವರನ್ನು ಪ್ರಶಂಸಿಸಿದ್ದರು.

TIMESOFINDIA.COM 30 Mar 2019, 3:07 pm
ಅಹಮದಾಬಾದ್: ಪಾಕಿಸ್ತಾನ ವಿಭಜಿಸಿದ ಕ್ರೆಡಿಟ್ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಲ್ಲುವುದಾದರೆ, ಬಾಲಾಕೋಟ್ ವಾಯುದಾಳಿಯ ಕ್ರೆಡಿಟ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಬಾರದೇಕೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರಶ್ನಿಸಿದ್ದಾರೆ.
Vijaya Karnataka Web rajanath


ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಾಮಪತ್ರ ಸಲ್ಲಿಕೆ ಬಳಿಕ, ಸಾರ್ವಜನಿಕ ಮೆರವಣಿಗೆಯಲ್ಲಿ ಮಾತನಾಡಿದ ಸಿಂಗ್, ಭಾರತೀಯ ಸೈನಿಕರ ಸಾಮರ್ಥ್ಯದಿಂದ ಪಾಕಿಸ್ತಾನ ವಿಂಗಡನೆಯಾಗಿ ಬಾಂಗ್ಲಾದೇಶ್ ಜನ್ಮ ತಾಳಿತು ಎಂದು ಹೇಳಿದರು.

ಭಾರತ-ಪಾಕಿಸ್ತಾನ ನಡುವೆ ನಡೆದ ಯುದ್ಧದ ಬಳಿಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಂಸತ್ತಿನಲ್ಲಿ ಇಂದಿರಾ ಗಾಂಧಿ ಅವರನ್ನು ಪ್ರಶಂಸಿದ್ದರು. ಜತೆಗೆ ಇಂದಿರಾ ಗಾಂಧಿ ಅವರು ಇಡೀ ದೇಶದ ಪ್ರಶಂಸೆಗೆ ಪಾತ್ರರಾಗಿದ್ದರು ಎಂದರು.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಜೈಷೆ ಮೊಹಮ್ಮದ್ ಭಯೋತ್ಪಾದಕರ ಆತ್ಮಾಹುತಿ ದಾಳಿಯಲ್ಲಿ 40ಕ್ಕೂ ಅಧಿಕ ಸಿಆರ್‌ಪಿಎಫ್ ಯೋಧರು ಹುತಾತ್ಮರಾದ ಬಳಿಕ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಸೇನೆಗೆ ಮುಕ್ತ ಅವಕಾಶ ನೀಡಿದ್ದರು ಎಂದು ರಾಜನಾಥ್ ಸಿಂಗ್ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ