ಆ್ಯಪ್ನಗರ

ತೈಲ ಬೆಲೆ ಏರಿಕೆಗೆ ಕಡಿವಾಣ: ಪ್ರಧಾನ್‌

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ಒಪೆಕ್‌ ರಾಷ್ಟ್ರಗಳಲ್ಲಿ ಪೆಟ್ರೋಲಿಯಂ ಉತ್ಪಾದನೆ ಕುಸಿದ ಪರಿಣಾಮ ದೇಶದಲ್ಲಿ ಪೆಟ್ರೋಲ್‌ /ಡೀಸೆಲ್‌ ಬೆಲೆಯನ್ನು ಅನಿವಾರ್ಯ ಕಾರಣಗಳಿಂದ ಏರಿಸಲಾಗಿದೆ. ಇತ್ತೀಚಿನ ತಿಂಗಳಲ್ಲಿ ತೈಲ ಬೆಲೆ ಏರಿಕೆಯಾಗುತ್ತಲೇ ಇದ್ದು ಇದರ ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ.

Vijaya Karnataka 21 May 2018, 7:44 am
ಭುವನೇಶ್ವರ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ಒಪೆಕ್‌ ರಾಷ್ಟ್ರಗಳಲ್ಲಿ ಪೆಟ್ರೋಲಿಯಂ ಉತ್ಪಾದನೆ ಕುಸಿದ ಪರಿಣಾಮ ದೇಶದಲ್ಲಿ ಪೆಟ್ರೋಲ್‌ /ಡೀಸೆಲ್‌ ಬೆಲೆಯನ್ನು ಅನಿವಾರ್ಯ ಕಾರಣಗಳಿಂದ ಏರಿಸಲಾಗಿದೆ. ಇತ್ತೀಚಿನ ತಿಂಗಳಲ್ಲಿ ತೈಲ ಬೆಲೆ ಏರಿಕೆಯಾಗುತ್ತಲೇ ಇದ್ದು ಇದರ ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ.
Vijaya Karnataka Web Dharmendra Pradhan


ಲಾಭದ ಉದ್ದೇಶದಿಂದ ಬೇಕಾಬಿಟ್ಟಿ ರಫ್ತು ದರಗಳನ್ನು ಏರಿಸದೇ ಬೆಲೆಯಲ್ಲಿ ಸಾಧ್ಯವಾದಷ್ಟೂ ಸ್ಥಿರತೆ ಕಾಪಾಡಿಕೊಳ್ಳುವಂತೆ ಕೇಂದ್ರ ಸರಕಾರ ಒಪೆಕ್‌ ರಾಷ್ಟ್ರಗಳನ್ನು ಅದರಲ್ಲೂ ಮುಖ್ಯವಾಗಿ ಸೌದಿ ಅರೇಬಿಯಾವನ್ನು ಇತ್ತೀಚೆಗೆ ಕೋರಿಕೊಂಡಿದೆ. ತೈಲ ಆಮದು ವೆಚ್ಚ ಹೆಚ್ಚಿದ್ದರಿಂದ ಅದನ್ನು ಸರಿದೂಗಿಸಲು ಈಗ ಅನಿವಾರ್ಯವಾಗಿ ತೈಲ ಬೆಲೆ ಏರಿಸಲಾಗಿದೆ. ಜನಸಾಮಾನ್ಯರಿಗೆ ಇದು ಹೊರೆಯಾಗುವುದರ ಜತೆಗೆ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪೆಟ್ರೋಲ್‌/ಡೀಸೆಲ್‌ ದರ ಏರಿಕೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು. ಆದರೆ ಈ ಬಗ್ಗೆ ಅವರು ಯಾವುದೇ ಕಾರ್ಯ ಯೋಜನೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ