ಆ್ಯಪ್ನಗರ

ಯಾವ ಕಾರಣಕ್ಕೂ ಪ.ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿಗೆ ಅವಕಾಶವಿಲ್ಲ: ಮಮತಾ ಬ್ಯಾನರ್ಜಿ

ಯಾವುದೇ ಕಾರಣಕ್ಕೂ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಎನ್ ಆರ್‌ಸಿಯನ್ನು ದೇಶಾದ್ಯಂತ ಜಾರಿಗೆ ತರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಿಲುವಿಗೆ ಮಮತಾ ಅವರ ಪ್ರತಿಕ್ರಿಯೆ ಇದಾಗಿದೆ.

Vijaya Karnataka Web 20 Nov 2019, 4:46 pm
ಹೊಸದಿಲ್ಲಿ: ಯಾವುದೇ ಕಾರಣಕ್ಕೂ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
Vijaya Karnataka Web Mamata Banerjee
ಪ. ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ.


ಎನ್ ಆರ್‌ಸಿಯನ್ನು ದೇಶಾದ್ಯಂತ ಜಾರಿಗೆ ತರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಗುರುವಾರ ರಾಜ್ಯಸಭೆಯಲ್ಲಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ ಅವರು, ಬಿಜೆಪಿ ಸವಾಲು ಒಡ್ಡಿದ್ದಾರೆ. ಅಸ್ಸಾಂನಲ್ಲಿ 14 ಲಕ್ಷ ಹಿಂದೂಗಳು ಮತ್ತು ಬೆಂಗಾಲಿಯರನ್ನು ಎನ್‌ಆರ್‌ಸಿಯಿಂದ ಹೊರಗೆ ಇಟ್ಟಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ದೇಶದೆಲ್ಲೆಡೆ ಎನ್‌ಆರ್‌ಸಿ ಜಾರಿ: ರಾಜ್ಯಸಭೆಯಲ್ಲಿ ಅಮಿತ್‌ ಶಾ ಘೋಷಣೆ

ಕೆಲವು ವ್ಯಕ್ತಿಗಳುಎನ್‌ಆರ್‌ಸಿ ಜಾರಿ ಹೆಸರಲ್ಲಿ ರಾಜ್ಯದಲ್ಲಿ (ಪ.ಬಂಗಾಳ) ಅಶಾಂತಿ ಉಂಟುಮಾಡುವ ಪ್ರಯತ್ನಿಸುತ್ತಿದ್ದಾರೆ. ಈ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದ್ದು, ಯಾವ ಕಾರಣಕ್ಕೂ ಎನ್ಆರ್‌ಸಿ ಜಾರಿಗೆ ಪಶ್ಚಿಮ ಬಂಗಾಳದಲ್ಲಿ ಅವಕಾಶ ಮಾಡಿಕೊಡುವುದಿಲ್ಲ. ಪ.ಬಂಗಾಳದಲ್ಲಿ ಯಾರೊಬ್ಬರೂ ತಮ್ಮ ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ. ಇಲ್ಲಿ ಯಾರಿಗೂ ನಿರಾಶ್ರಿತರ ಪಟ್ಟ ಕಟ್ಟುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಏನಿದು ಪೌರತ್ವ ಕಾಯಿದೆ? ಯಾಕೆ ಆತಂಕ ಮತ್ತು ವಿರೋಧ? ಇಲ್ಲಿದೆ ಪೂರ್ಣ ವಿವರ

ಅಮಿತ್‌ ಶಾ ನಿರ್ಧಾರ:
ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ದೇಶದ ಎಲ್ಲ ನಾಗರಿಕರು ಎನ್‌ಆರ್‌ಸಿ ವ್ಯಾಪ್ತಿಗೆ ಒಳಪಡುತ್ತಾರೆ. ಎನ್‌ಆರ್‌ಸಿಗೂ ಪೌರತ್ವ ತಿದ್ದುಪಡಿ ಕಾಯ್ದೆಗೂ ವ್ಯತ್ಯಾಸವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯಸಭೆಯಲ್ಲಿ ಹೇಳಿದ್ದರು.

ಇತ್ತೀಚೆಗಷ್ಟೇ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ)ಯನ್ನು ಪಶ್ಚಿಮ ಬಂಗಾಳಕ್ಕೂ ವಿಸ್ತರಿಸಲಿದ್ದು, ಅಕ್ರಮ ವಲಸಿಗರನ್ನು ಹೊರಗಟ್ಟಲಾಗುವುದು ಎಂದು ಅಮಿತ್ ಘೋಷಿಸಿದ್ದರು. ಇದಕ್ಕೂ ಅದಕ್ಕೂ ಮೊದಲು ಎಲ್ಲ ಹಿಂದು, ಸಿಖ್‌, ಜೈನ, ಹಾಗೂ ಬೌದ್ಧ ನಿರಾಶ್ರಿತರಿಗೆ ಅನ್ವಯವಾಗುವಂತೆ ಪೌರತ್ವ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಬೇಕಿದೆ ಎಂದು ಹೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ