ಆ್ಯಪ್ನಗರ

ಚಲಿಸುತ್ತಿದ್ದ ಕಾರಲ್ಲೇ ಯುವತಿ ಮೇಲೆ ಅತ್ಯಾಚಾರ

ಯುವತಿಯನ್ನು ಅಪಹರಿಸಿ ಚಲಿಸುತ್ತಿದ್ದ ಕಾರಿನಲ್ಲಿ ಆಕೆಯ ಮೇಲೆ ಮೂವರು ಅತ್ಯಾಚಾರ ನಡೆಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 7 Jul 2017, 1:00 pm
ಮುಂಬಯಿ: ಚಲಿಸುವ ಕಾರಿನಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಮತ್ತೊಂದು ಹೃದಯ ವಿದ್ರಾವಕ ಘಟನೆ ಮುಂಬಯಿ ಹೊರವಲಯದ ಚಾರ್ಕೋಪ್‌ನಲ್ಲಿ ನಡೆದಿದೆ.
Vijaya Karnataka Web woman gang raped in car
ಚಲಿಸುತ್ತಿದ್ದ ಕಾರಲ್ಲೇ ಯುವತಿ ಮೇಲೆ ಅತ್ಯಾಚಾರ


ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಅಪಹರಿಸಿ ಚಲಿಸುತ್ತಿದ್ದ ಕಾರಿನಲ್ಲಿ ಆಕೆಯ ಮೇಲೆ ಮೂವರು ಅತ್ಯಾಚಾರ ನಡೆಸಿದ್ದಾರೆ.

ಕಾಲೇಜು ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಹತ್ತಿರವೇ ಕಾರು ನಿಲ್ಲಿಸಿದ ಆರೋಪಿಗಳು ಆಕೆಯನ್ನು ಕಾರಿನೊಳಗೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎಂದು ಯುವತಿ ದೂರು ದಾಖಲಿಸಿದ್ದಾರೆ.

'ನನ್ನ ಬಳಿ ಕಾರು ನಿಲ್ಲಿಸಿ ಒಳಗೆ ಎಳೆದುಕೊಂಡ ಬಳಿಕ ಒಬ್ಬ ವ್ಯಕ್ತಿ ನನಗೆ 'ಆತನಿಂದ ದೂರ ನಿಲ್ಲು ಎಂದು ಎಷ್ಟು ಹೇಳಿದರೂ ನೀನು ಕೇಳಲಿಲ್ಲ, ಈಗ ಅನುಭವಿಸು' ಎಂದು ಹೇಳಿ ಅತ್ಯಾಚಾರ ನಡೆಸಿದ್ದಾನೆ' ಎಂದು ಯುವತಿ ದೂರಿನಲ್ಲಿ ವಿವರಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ದುಷ್ಕರ್ಮಿಗಳ ಸೆರೆಗೆ ಪೊಲೀಸರು ವ್ಯಾಪಕ ಬಲೆ ಬೀಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ