ಆ್ಯಪ್ನಗರ

ಸಾಮೂಹಿಕ ಅತ್ಯಾಚಾರದಿಂದ ಪಾರಾಗಲು 3ನೇ ಮಹಡಿಯಿಂದ ಹಾರಿದ ಮಹಿಳೆ

ಶನಿವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಮಹಿಳೆ ಮೂರನೇ ಮಹಡಿಯಿಂದ ಹಾರಿರುವುದನ್ನು ಗಮನಿಸಿದ ಅಪಾರ್ಟ್‌ಮೆಂಟ್‌ನ ನಿವಾಸಿಯೊಬ್ಬರು ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ಮುಟ್ಟಿಸಿದ್ದಾರೆ.

TIMESOFINDIA.COM 21 Oct 2018, 5:24 pm
ಜೈಪುರ: ಸಾಮೂಹಿಕ ಅತ್ಯಾಚಾರದಿಂದ ಪಾರಾಗಲು 32 ವರ್ಷದ ಮಹಿಳೆಯೊಬ್ಬರು ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಜಿಗಿದ ಘಟನೆ ಇಲ್ಲಿನ ಮೋಹನಾ ಪ್ರದೇಶದಲ್ಲಿ ನಡೆದಿದೆ.
Vijaya Karnataka Web gang


ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಬಳಿಕ ಅಪಾರ್ಟ್‌ಮೆಂಟ್‌ನಿಂದ ನಾಪತ್ತೆಯಾಗಿದ್ದ ಇಬ್ಬರ ವಿರುದ್ಧ ಅತ್ಯಾಚಾರ ಪ್ರಕರಣದಡಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಮಹಿಳೆ ಮೂರನೇ ಮಹಡಿಯಿಂದ ಹಾರಿರುವುದನ್ನು ಗಮನಿಸಿದ ಅಪಾರ್ಟ್‌ಮೆಂಟ್‌ನ ನಿವಾಸಿಯೊಬ್ಬರು ಶನಿವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ಮುಟ್ಟಿಸಿದ್ದಾರೆ.

'ಘಟನೆ ಸಂಬಂಧ ಮಾಹಿತಿ ಪಡೆದು ಸ್ಥಳಕ್ಕೆ ದೌಡಾಯಿಸಿ, ಸ್ಥಳೀಯರನ್ನು ವಿಚಾರಣೆ ನಡೆಸಿದ್ದೆವು. ಶುಕ್ರವಾರ ತಡರಾತ್ರಿ ಸಂತ್ರಸ್ತ ಮಹಿಳೆ ಇಬ್ಬರು ಪುರುಷರ ಜತೆ ಅಪಾರ್ಟ್‌ಮೆಂಟ್‌ನಲ್ಲಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಲಭ್ಯವಾಯಿತು' ಎಂದು ಪೊಲೀಸರು ತಿಳಿಸಿದ್ದಾರೆ.

ನೇಪಾಳ ಮೂಲದ ದಿಲ್ಲಿ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆ ಆರೋಪಿಯಲ್ಲೊಬ್ಬನ ಜತೆ ಸಂಬಂಧ ಹೊಂದಿದ್ದರು. ಆದರೆ, ಶುಕ್ರವಾರ ತಡ ರಾತ್ರಿ ಸಂತ್ರಸ್ತೆಯ ಇನಿಯ ಹಾಗೂ ಆತನ ಸ್ನೇಹಿತ ಸಾಮೂಹಿಕ ಅತ್ಯಾಚಾರದ ಸಂಚು ರೂಪಿಸಿದ್ದರು ಎಂದು ಮಾನಸ ಸರೋವರದ ಹೆಚ್ಚುವರಿ ಪೊಲೀಸ್ ಆಯುಕ್ತ ಕೆ.ಕೆ.ಅವಸ್ಥಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ