ಆ್ಯಪ್ನಗರ

4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕಿ ಬಂಧನ

ಶಿಕ್ಷಕಿಯೊಬ್ಬಳು 4 ವರ್ಷದ ವಿದ್ಯಾರ್ಥಿನಿಗೆ ಶಾಲಾ ಅವಧಿಯಲ್ಲಿಯೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಂಡಿವಿಲಿಯಲ್ಲಿನ ಶಾಲೆಯೊಂದರಲ್ಲಿ ನಡೆದಿದೆ.

TIMESOFINDIA.COM 29 Sep 2018, 1:46 pm
Vijaya Karnataka Web Sexual Abuse
ಮುಂಬಯಿ: ಶಿಕ್ಷಕಿಯೊಬ್ಬಳು 4 ವರ್ಷದ ವಿದ್ಯಾರ್ಥಿನಿಗೆ ಶಾಲಾ ಅವಧಿಯಲ್ಲಿಯೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಂಡಿವಿಲಿಯಲ್ಲಿನ ಶಾಲೆಯೊಂದರಲ್ಲಿ ನಡೆದಿದೆ.

ಬಾಲಕಿ ಎಲ್‌ಕೆಜಿ ವಿದ್ಯಾರ್ಥಿನಿಯಾಗಿದ್ದು, ಸೋಮವಾರ ಶಾಲೆಯಿಂದ ಮರಳಿದ ಬಳಿಕ ಶಿಕ್ಷಕಿ ಆಕ್ಷೇಪಾರ್ಹವಾಗಿ ಸ್ಪರ್ಶಿಸಿದ್ದಾಗಿ ಪೋಷಕರಲ್ಲಿ ಹೇಳಿದ್ದಳು. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಕ್ಸೋ ಕಾಯಿದೆಯಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

ತನಿಖೆಗೆ ಸಹಕಾರ ನೀಡುವುದಾಗಿ ಹೇಳಿರುವ ಶಾಲಾ ಅಧಿಕಾರಿಗಳು ಆತಂಕಗೊಂಡಿರುವ ಪೋಷಕರಿಗೆ ಧೈರ್ಯ ತುಂಬಿದ್ದಾರೆ.

ಆರೋಪಿ ಶಿಕ್ಷಕಿ 2 ವರ್ಷದಿಂದ ಇದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು ತನಿಖೆ ಪ್ರಗತಿಯಲ್ಲಿರುವುದರಿಂದ ಆಕೆಯನ್ನು ಅಮಾನತಿನಲ್ಲಿಡಲಾಗಿದೆ.

ಶೌಚಾಲಯವನ್ನು ಹೊರತು ಪಡಿಸಿ ಶಾಲೆಯ ಎಲ್ಲೆಡೆ ಸಿಸಿ ಕ್ಯಾಮರಾಗಳಿಂದ ಅದರ ದೃಶ್ಯಾವಳಿಗಳನ್ನು ಪೊಲೀಸರಿಗೊಪ್ಪಿಸಲಾಗಿದೆ ಎಂದು ಶಾಲಾಧಿಕಾರಿಗಳು ತಿಳಿಸಿದ್ದಾರೆ.

ಸಿಸಿ ಕ್ಯಾಮರಾದಲ್ಲಿ ಶಿಕ್ಷಕಿಯ ಮೇಲಿನ ಆರೋಪ ಸಾಬೀತುಪಡಿಸುವಂಥ ಯಾವುದೇ ದೃಶ್ಯ ಕಂಡುಬಂದಿಲ್ಲ. ಆದರೆ ಬಾಲಕಿ ಹೇಳಿಕೆ ಆಧಾರದ ಮೇಲೆ ಶಿಕ್ಷಕಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ