ಆ್ಯಪ್ನಗರ

ವರದಕ್ಷಿಣಿ ಕಿರುಕುಳ: ಸೆಲ್ಫಿ ವೀಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ

ವರದಕ್ಷಿಣಿ ಕಿರುಕುಳ ಆರೋಪದ ವಿಡಿಯೋ ಮಾಡಿಟ್ಟು 20 ವರ್ಷದ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Agencies 13 Apr 2017, 7:06 pm
ಹೈದರಾಬಾದ್: ವರದಕ್ಷಿಣಿ ಕಿರುಕುಳ ಆರೋಪದ ವಿಡಿಯೋ ಮಾಡಿಟ್ಟು 20 ವರ್ಷದ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
Vijaya Karnataka Web women ends life after alleging dowry harassment in video
ವರದಕ್ಷಿಣಿ ಕಿರುಕುಳ: ಸೆಲ್ಫಿ ವೀಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ


'ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ, ಪತಿ ಹಾಗೂ ಆತನ ಕುಟುಂಬ ಸದಸ್ಯರ ವಿರುದ್ಧ ವರದಕ್ಷಿಣಿ ಕಿರುಕುಳ ಆರೋಪ ಮಾಡಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ ಜನವರಿಯಲ್ಲಿ ಇರ್ಫಾನ್ ಎಂಬುವವರನ್ನು ವಿವಾಹವಾಗಿದ್ದರು. ಕೆಲ ದಿನಗಳ ಹಿಂದೆ ತವರು ಮನೆಗೆ ಬಂದಿದ್ದ ಅವರು, ತನ್ನ ಪತಿ, ಅತ್ತೆ ಹಾಗೂ ಇಬ್ಬರು ನಾದಿನಿಯರು ನೀಡುತ್ತಿರುವ ಕಿರುಕುಳ ಕುರಿತು ಪೋಷಕರ ಮುಂದೆ ಪ್ರಸ್ತಾಪಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

'ಪತಿಯ ಕುಟುಂಬ ಸದಸ್ಯರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು ಗೃಹಿಣಿ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದರು. ಗೃಹಿಣಿಯ ಆರೋಪದ ಮೇಲೆ ಆಕೆಯ ಪತಿ ಹಾಗೂ ಕುಟುಂಬ ಸದಸ್ಯರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಸಹಾಯಕ ಪೊಲೀಸ್ ಆಯುಕ್ತ ವಿಂದರ್ ರೆಡ್ಡಿ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ