ಆ್ಯಪ್ನಗರ

ಪ್ರಜಾಪತಿ ಕುಟುಂಬ ಭೇಟಿಗೆ ಒಪ್ಪದ ಯೋಗಿ

ಅತ್ಯಾಚಾರ ಆರೋಪದ ಮೇಲೆ ಜೈಲುಪಾಲಾಗಿರುವ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಕುಟುಂಬ ಸದಸ್ಯರನ್ನು ಭೇಟಿಯಾಗಲು ಸಿಎಂ ಯೋಗಿ ಆದಿತ್ಯನಾಥ್ ನಿರಾಕರಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 2 May 2017, 1:02 pm
ಲಖನೌ: ಅತ್ಯಾಚಾರ ಆರೋಪದ ಮೇಲೆ ಜೈಲು ಪಾಲಾಗಿರುವ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರಾಕರಿಸಿದ್ದಾರೆ.
Vijaya Karnataka Web yogi adityanath refuses to meet gayatri prajapatis family
ಪ್ರಜಾಪತಿ ಕುಟುಂಬ ಭೇಟಿಗೆ ಒಪ್ಪದ ಯೋಗಿ


ಪ್ರಜಾಪತಿ ಅವರ ಪತ್ನಿ, ಇಬ್ಬರು ಹೆಣ್ಣುಮಕ್ಕಳೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭೇಟಿಗೆ ತೆರಳಿದ್ದರು. ಆದರೆ, ತಮ್ಮನ್ನು ಭೇಟಿಯಾಗಲು ಮುಖ್ಯಮಂತ್ರಿ ನಿರಾಕರಿಸುತ್ತಿದ್ದಾರೆ ಎಂದು ಪ್ರಜಾಪತಿ ಪತ್ನಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

'ನಾವು ಮುಖ್ಯಮಂತ್ರಿ ಅವರನ್ನು ಭೇಟಿಯಾಗಬೇಕೆಂದು ಬಯಸಿದ್ದೇವೆ. ಆದರೆ, ಅವರು ನಮ್ಮ ಭೇಟಿಗೆ ಸಮಯ ನೀಡುತ್ತಿಲ್ಲ. ನನ್ನ ಪತಿಗೆ ನ್ಯಾಯ ಸಿಗಬೇಕಿದೆ. ಭೇಟಿಗೆ ಮತ್ತೊಂದು ಪ್ರಯತ್ನ ಮಾಡುತ್ತೇವೆ' ಎಂದು ಹೇಳಿಕೊಂಡಿದ್ದಾರೆ.

'ನನ್ನ ತಂದೆ ಅಮಾಯಕ. ಪ್ರಕರಣದಲ್ಲಿ ಅವರನ್ನು ಬಲಿಪಶು ಮಾಡಲಾಗಿದೆ. ನನ್ನ ತಂದೆಗೆ ನ್ಯಾಯ ಸಿಗಬೇಕು. ನಮ್ಮ ಕಷ್ಟಕ್ಕೆ ಮುಖ್ಯಮಂತ್ರಿ ಅವರು ಸ್ಪಂದಿಸುವ ನಂಬಿಕೆ ಇದೆ' ಎಂದು ಪ್ರಜಾಪತಿ ಪುತ್ರಿ ಹೇಳಿದ್ದಾರೆ.

ಅತ್ಯಾಚಾರ ಪ್ರಕರಣದ ಆರೋಪ ಹೊತ್ತು ಕೆಲ ಕಾಲ ತಲೆ ಮರೆಸಿಕೊಂಡಿದ್ದ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರನ್ನು ಲಖನೌ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ