ಆ್ಯಪ್ನಗರ

ಅಯೋಧ್ಯೆಯಲ್ಲಿ ಯೋಗಿ ಆದಿತ್ಯನಾಥ್: ಭೂಮಿ ಪೂಜೆಯ ಮೇಲುಸ್ತುವಾರಿ ಹೊತ್ತ ಯುಪಿ ಸಿಎಂ!

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಭೇಟಿ ನೀಡಿದ್ದು, ಭೂಮಿ ಪೂಜೆ ಕಾರ್ಯಕ್ರಮದ ಮೇಲುಸ್ತುವಾರಿ ಹೊತ್ತಿದ್ದಾರೆ. ಇದೇ ವೇಳೆ ಇಲ್ಲಿನ ಹನುಮಾನ್ ಗರೀಯಲ್ಲಿ ಯೋಗಿ ಆದಿತ್ಯನಾಥ್ ವಿಶೇಷ ಪೂಜೆ ನೆರವೇರಿಸಿದರು.

Vijaya Karnataka Web 3 Aug 2020, 10:06 pm
ಅಯೋಧ್ಯೆ: ಇದೇ ಆಗಸ್ಟ್ 5ರಂದು ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಭವ್ಯ ರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಲಿದ್ದು, ಪ್ರಧಾನಿ ಮೋದಿ ಶಿಲಾನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಭೇಟಿ ನೀಡಿದ್ದು, ಭೂಮಿ ಪೂಜೆ ಕಾರ್ಯಕ್ರಮದ ಮೇಲುಸ್ತುವಾರಿ ಹೊತ್ತಿದ್ದಾರೆ.

ಇದೇ ವೇಳೆ ಇಲ್ಲಿನ ಹನುಮಾನ್ ಗರೀಯಲ್ಲಿ ವಿಶೇಷ ಪೂಜೆ ನೆರವೇರಿಸಿದ ಯೋಗಿ ಆದಿತ್ಯನಾಥ್, ಆಗಸ್ಟ್ 5ರ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಭೂಮಿ ಪೂಜೆ ಮೊದಲ ಆಮಂತ್ರಣ ಪತ್ರಿಕೆ ಸೇರಿದ್ದು ಇಕ್ಬಾಲ್ ಅನ್ಸಾರಿ ಕೈಗೆ: ಯಾರಿವರು?

ಆಗಸ್ಟ್ 5ರ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಕೊರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ನಿಯಮಾವಳಿಗಳನ್ನು ಕಟ್ಟುನಿಟ್ಟಿನಿಂ ಜಾರಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಭೂಮಿ ಫುಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಯೋಧ್ಯೆಗೆ ಅತ್ಯಂತ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಕಾರ್ಯಕ್ರಮ ಅತ್ಯಂತ ಸರಾಗವಾಗಿ ನಡೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.


ಈಗಾಗಲೇ ಆಮಂತ್ರಣ ಪತ್ರಿಕೆಯನ್ನು ಆಯ್ದ ಗಣ್ಯ ವ್ಯಕ್ತಿಗಳಿಗೆ ತಲುಪಿಸಲಾಗಿದ್ದು, ಕೋವಿಡ್ ನಿಯಮಾವಳಿಗಳ ಅನುಸಾರವಾಗಿಯೇ ಇಡೀ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಯೋಗಿ ಆದಿತ್ಯನಾಥ್ ಮಾಹಿತಿ ನೀಡಿದರು.

ಅಯೋಧ್ಯೆ ಭೂಮಿ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ: ಮೋದಿ ಸೇರಿ ನಾಲ್ವರ ಗಣ್ಯರ ಹೆಸರು!

ಒಟ್ಟಿನಲ್ಲಿ ಆಗಸ್ಟ್ 5ರ ಅಯೋಧ್ಯೆ ಭೂಮಿ ಪೂಜೆಗೆ ಸಕಲ ಸಿದ್ಧತೆಯೂ ಪೂರ್ಣಗೊಂಡಿದ್ದು, ಪ್ರಧಾನಿ ಮೋದಿ ಅವರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಇಡೀ ದೇಶ ಕಾತರದದಿಂದ ಕಾಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ