ಆ್ಯಪ್ನಗರ

ಕಲಬುರಗಿಯಲ್ಲಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಅನುಭವ ಮಂಟಪ: ಯಡಿಯೂರಪ್ಪ ಘೋಷಣೆ

ಕಲಬುರಗಿ ಜಿಲ್ಲೆಯಲ್ಲಿ ಸುಮಾರು 50 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಾಗ್ದಾನ ಮಾಡಿದ್ದಾರೆ.

Vijaya Karnataka Web 17 Sep 2019, 12:52 pm
ಕಲಬುರಗಿ: ನಗರದಲ್ಲಿ ಕೆಲವೇ ದಿನಗಳಲ್ಲಿ ಸುಮಾರು 50 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಿಸಿದರು.
Vijaya Karnataka Web bsy2


ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸುಮಾರು 200ಕ್ಕೂ ಅಧಿಕ ಮಠಾಧೀಶರು ಏಪ೯ಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಈ ವಾಗ್ದಾನ ಮಾಡಿದರು.

ಈ ಕಾಯ೯ಕ್ಕಾಗಿ ಮೊದಲ ಕಂತಿನ ರೂಪದಲ್ಲಿ ತಕ್ಷಣ ರೂ. 20 ಕೋಟಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಯೋಜನೆಗಾಗಿ 20 ಎಕರೆ ಪ್ರದೇಶ ಮೀಸಲಿದೆ. ಹೀಗಾಗಿ, ಉದ್ದೇಶಿತ ಅನುಭವ ಮಂಟಪದಲ್ಲಿ ಬೃಹತ್ ಗ್ರಂಥಾಲಯ, ಕಲ್ಯಾಣ ಮಂಟಪ, ಭಕ್ತ ನಿವಾಸ ಸೇರಿದಂತೆ ಎಲ್ಲ ರೀತಿಯ ಅನುಕೂಲ ಕಲ್ಪಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ಇದಕ್ಕೂ ಮೊದಲು ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದ ಮುಖ್ಯಮಂತ್ರಿ ಬಿಎಸ್‌ವೈ, ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ನಿಜಾಮರ ಕಪಿಮುಷ್ಠಿಯಿಂದ ಮುಕ್ತಿಗೊಳಿಸಿದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಮಾರ್ಗದಲ್ಲೇ ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಈ ದೇಶದ ಎರಡನೇ ಸರದಾರ್ ಪಟೇಲ್ ಎಂದು ವರ್ಣಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಬಡತನದ ವಿರುದ್ಧ ಸಮರ ಸಾರಿದ್ದಾರೆ. ಈ ನಿಟ್ಟಿನಲ್ಲಿ ಪಟೇಲರಂತೆಯೇ ಮೋದಿಯವರೂ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೈದರಾಬಾದ್ ಕನಾ೯ಟಕ ಪ್ರದೇಶಕ್ಕೆ ಕಲ್ಯಾಣ ಕನಾ೯ಟಕ ಎಂದು ಮರು ನಾಮಕರಣ ಮಾಡಲು ದೊರೆತ ಅವಕಾಶ ತಮ್ಮ ಪೂವ೯ ಜನ್ಮದ ಪುಣ್ಯ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ