ಆ್ಯಪ್ನಗರ

ಮಹಿಳೆಯರಿಗೆ ಥಳಿಸಿದ ಆರೋಪಿಗಳ ಅರೆಸ್ಟ್‌

ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಂಠಾಣ ಗ್ರಾಮದಲ್ಲಿ ಇಬ್ಬರು ಮಹಿಳೆಯರನ್ನು ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಟಕಲ್‌ ಪೊಲೀಸರು ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲು ಮಾಡಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.

Vijaya Karnataka 14 Aug 2019, 4:08 pm
ಕಲಬುರಗಿ :ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಂಠಾಣ ಗ್ರಾಮದಲ್ಲಿ ಇಬ್ಬರು ಮಹಿಳೆಯರನ್ನು ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಟಕಲ್‌ ಪೊಲೀಸರು ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲು ಮಾಡಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.
Vijaya Karnataka Web arrest of accused of assaulting women
ಮಹಿಳೆಯರಿಗೆ ಥಳಿಸಿದ ಆರೋಪಿಗಳ ಅರೆಸ್ಟ್‌


ವಿಡಿಯೋದಲ್ಲಿದ್ದ ವ್ಯಕ್ತಿಗಳನ್ನು ದಳಪತಿ ಜಗನ್ನಾಥ, ಮಹೇಶ, ಕುಶಾಲ್‌ ಮತ್ತು ಶರಣಪ್ಪ ಎಂದು ಗುರುತಿಸಲಾಗಿದೆ. ಈ ನಾಲ್ವರು ವಿಡಿಯೋದಲ್ಲಿ ಓಡಾಡಿ ಮಹಿಳೆಯರನ್ನು ಥಳಿಸಿದ್ದು ಕಂಡು ಬಂದಿದೆ. ಗ್ರಾಮಸ್ಥರ ಸಹಾಯದಿಂದ ವಿಡಿಯೋದಲ್ಲಿದ್ದ ವ್ಯಕ್ತಿಗಳನ್ನು ಪತ್ತೆ ಮಾಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಯಾರೂ ದೂರು ಕೊಟ್ಟಿಲ್ಲ. ಸ್ವಯಂ ಪ್ರೇರಣೆಯಿಂದ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಮಾಡಲಾಗಿದೆ. ಈ ವೇಳೆಯಲ್ಲಿ ವಿಡಿಯೋದಲ್ಲಿದ್ದವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ರಕಟಲ್‌ ಪೊಲೀಸ್‌ ಠಾಣೆಯ ಪಿಎಸ್‌ಐ ಇಂದಿರಾಬಾಯಿ ಪಾಟೀಲ ತಿಳಿಸಿದ್ದಾರೆ. ಘಟನೆ ಬಗ್ಗೆ ವಿಜಯ ಕರ್ನಾಟಕ ಮಂಗಳವಾರದ ಸಂಚಿಕೆಯಲ್ಲಿ ಸುದ್ದಿ ಪ್ರಕಟಿಸಿತ್ತು.

ವಿಡಿಯೋ ವೈರಲ್‌

ಸುಂಠಾಣ ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿ ಮಹಿಳೆಯರಿಬ್ಬರನ್ನು ಮನಸೋಇಚ್ಛೆ ಥಳಿಸಲಾಗಿತ್ತು. ಗೌಡರ ಹೇಳಿದ್ದಾರೆಂದು ಥಳಿಸಲಾಗುತ್ತಿದೆ ಎಂದು ವಿಡಿಯೋದಲ್ಲಿನ ಆಡಿಯೋ ಫೇಸ್‌ಬುಕ್‌ನಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನು ನೆಟ್ಟಿಗರು ಸುಂಠಾಣ ಭಾಗದಲ್ಲಿರುವ ಪಾಳೆಗಾರಿಕೆ ಸಂಸ್ಕೃತಿಯನ್ನು ವಿರೋಧಿಸಿದ್ದರು. ಇದರಿಂದಾಗಿ ಪೊಲೀಸರು ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಿದ್ದಾರೆ.


ಸುಂಠಾಣದಲ್ಲಿ ಮಹಿಳೆಯರಿಬ್ಬರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳ ನಿರ್ದೇಶನದಂತೆ ಸ್ವಯಂ ಪ್ರೇರಣೆಯಿಂದಾಗಿ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ. ಘಟನೆ ಸಂಬಂಧ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- ಇಂದಿರಾಬಾಯಿ ಪಾಟೀಲ, ಪಿಎಸ್‌ಐ ರಟಕಲ್‌ಠಾಣೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ