ಆ್ಯಪ್ನಗರ

ಸಿದ್ದರಾಮಯ್ಯ ಸರಕಾರ ಬದಲಿಸಬೇಕು: ಬಿಎಸ್‌ವೈ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲುವು ಸಾಧಿಸಿ, ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಕರ್ನಾಟಕವನ್ನು ಮಾದರಿ ರಾಜ್ಯ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

Vijaya Karnataka Web 28 Feb 2018, 9:19 pm
ಹೊಸಪೇಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲುವು ಸಾಧಿಸಿ, ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಕರ್ನಾಟಕವನ್ನು ಮಾದರಿ ರಾಜ್ಯ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
Vijaya Karnataka Web bsy urged to change government in karnataka
ಸಿದ್ದರಾಮಯ್ಯ ಸರಕಾರ ಬದಲಿಸಬೇಕು: ಬಿಎಸ್‌ವೈ


ನಗರದ ಮುನ್ಸಿಪಲ್ ಮೈದಾನದಲ್ಲಿ ಬುಧವಾರ ನಡೆದ ಬಿಜೆಪಿ ಸಂಕಲ್ಪ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿದ್ದ ಆನಂದ್ ಸಿಂಗ್ ಹಾಗೂ ನಾಗೇಂದ್ರ ಕಾಂಗ್ರೆಸ್ ಗೆ ಸೇರಿ ದ್ರೋಹ ಬಗೆದಿದ್ದಾರೆ. ಅವರನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸುತ್ತೇವೆ. ಭ್ರಷ್ಟರಾಗಿರುವ ಇವರಿಬ್ಬರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜತೆಗೆ ಕುಳ್ಳಿರಿಸಿ ಕೊಂಡು ಭ್ರಷ್ಟಾಚಾರ ದ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರ ನಡೆದಿದೆ. ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರಕಾರ ಬದಲಿಸಬೇಕು ಎಂದರು.

ಬಿಜೆಪಿ ಅಧಿಕಾರಕ್ಕೆ ಬಂದರೆ, ನೀರಾವರಿಗೆ ಒಂದು ಲಕ್ಷ ಕೋಟಿ ರೂ. ಖರ್ಚು ಮಾಡಲಾಗುವುದು. ಈ ಭಾಗದಲ್ಲಿ ಪ್ರವಾಸೋದ್ಯಮ ಕಾರಿಡಾರ್ ನಿರ್ಮಿಸಲಾಗುವುದು. ಹಂಪಿ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಮತ್ತೆ ಆರಂಭಿಸಲಾಗುವುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ