ಆ್ಯಪ್ನಗರ

ಶೀಘ್ರವೇ ಸಚಿವ ಸಂಪುಟ ವಿಸ್ತರಣೆ: ಕಲಬುರಗಿ ಜಿಲ್ಲೆಗೆ ಸಚಿವ ಸ್ಥಾನ?

ಬೀದರ್‌ನಲ್ಲೂ ಸಚಿವ ಸ್ಥಾನಕ್ಕೆ ಬೇಡಿಕೆ ಇದೆ. ಅದಲ್ಲದೆ, ಹೈಕದ ಎಲ್ಲ ಜಿಲ್ಲೆಗಳಲ್ಲಿ ಎರಡು, ಮೂರು ಬಾರಿ ಶಾಸಕರಾಗಿರುವವರು ಸಚಿವ ಸ್ಥಾನದ ಆಕಾಂಕ್ಷೆಯಲ್ಲಿದ್ದಾರೆ ಎಂದ ಅವರು, ತಾವು ಸಚಿವ ಸ್ಥಾನದ ರೇಸಿನಲ್ಲಿ ಇಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿದ್ದು, ಸಚಿವ ಸ್ಥಾನವನ್ನು ಹೈಕಮಾಂಡ್ ಫೈನಲ್ ಮಾಡಲಿದೆ ಎಂದರು.

Vijaya Karnataka Web 11 Nov 2018, 5:19 pm
ಕಲಬುರಗಿ: ಶೀಘ್ರವೇ ಸಮ್ಮಿಶ್ರ ಸರಕಾರದ ಸಚಿವ ಸಂಪುಟ ವಿಸ್ತರಣೆ ಆಗಲಿದ್ದುಘಿ, ನಿರೀಕ್ಷೆಯಂತೆ ಕಲಬುರಗಿಗೆ ಸಚಿವ ಸ್ಥಾನ ದೊರೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
Vijaya Karnataka Web eswar


ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್‌ನಲ್ಲೂ ಸಚಿವ ಸ್ಥಾನಕ್ಕೆ ಬೇಡಿಕೆ ಇದೆ. ಅದಲ್ಲದೆ, ಹೈಕದ ಎಲ್ಲ ಜಿಲ್ಲೆಗಳಲ್ಲಿ ಎರಡು, ಮೂರು ಬಾರಿ ಶಾಸಕರಾಗಿರುವವರು ಸಚಿವ ಸ್ಥಾನದ ಆಕಾಂಕ್ಷೆಯಲ್ಲಿದ್ದಾರೆ ಎಂದ ಅವರು, ತಾವು ಸಚಿವ ಸ್ಥಾನದ ರೇಸಿನಲ್ಲಿ ಇಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿದ್ದು, ಸಚಿವ ಸ್ಥಾನವನ್ನು ಹೈಕಮಾಂಡ್ ಫೈನಲ್ ಮಾಡಲಿದೆ ಎಂದರು.

ಶೀಘ್ರವೇ ರಾಜ್ಯದಲ್ಲಿ ಯಾವ ಜಿಲ್ಲೆಯಲ್ಲಿ ಬರಗಾಲ ಬಿದ್ದಿದೆಯೋ ಅಲ್ಲಿ ಬರ ಪರಿಹಾರ ಕಾಮಗಾರಿಗಳು ಆರಂಭವಾಗುತ್ತವೆ. ಕಾಮಗಾರಿ ಕೈಗೊಳ್ಳುವ ಮತ್ತು ರೈತರಿಗೆ, ಜನರಿಗೆ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ಸರಕಾರ ಸಂಪೂರ್ಣವಾಗಿ ಸನ್ನದ್ಧವಾಗಿದೆ ಎಂದು ತಿಳಿಸಿದರು.

ಸಮ್ಮಿಶ್ರ ಸರಕಾರ 3 ತಿಂಗಳಲ್ಲಿ ಬೀಳುತ್ತೆ ಎನ್ನುವ ಕನಸು ಕಾಣುತ್ತಿರುವ ಕೆ.ಎಸ್.ಈಶ್ವರಪ್ಪ ಅವರದ್ದು ತಿರುಕನ ಕನಸು. ಅದೆಲ್ಲವೂ ನಡೆಯದ ಮಾತು. ಉಪ ಚುನಾವಣೆಯಲ್ಲಿ ಉಭಯ ಪಕ್ಷಗಳು ಗೆದ್ದು ಬೀಗಿವೆ. ಜನರು ಆಶೀರ್ವಾದ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮುನ್ನಡೆಯುತ್ತದೆ. ಯಾವುದೇ ತೊಂದರೆ ಇಲ್ಲ ಎಂದರು.

* ಪ್ರಧಾನಿಯಿಂದ ಆರ್ಥಿಕ ಸ್ಥಿತಿ ಹಾಳು

ನೋಟು ಅಮಾನ್ಯೀಕರಣದಿಂದಾಗಿ ಬ್ಯಾಂಕುಗಳು ದುರ್ಬಲಗೊಂಡು, ವಿದೇಶಿ ಬಂಡವಾಳ ಬಾರದೇ ಮತ್ತು ಜಿಡಿಪಿ 1.5ರಷ್ಟು ಕುಸಿತ ಕಂಡು ದೇಶದ ಆರ್ಥಿಕ ಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಹಾಳಿಗೆಡವಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದರು.

ಅಚ್ಛೆ ದಿನ್ ಅಂದ್ರು ಯಾರಿಗೂ ಬರಲಿಲ್ಲ. 15ಲಕ್ಷ ಅಂದ್ರ ಯಾರಿಗೂ ಹಾಕಲಿಲ್ಲ. ಮೇಕಿನ್ ಇಂಡಿಯಾ, ಸ್ವಚ್ಛ ಭಾರತ್ ಅಂದ್ರು ಎಲ್ಲವೂ ಠುಸ್ ಆದವು. ಈಗ 3.50 ಲಕ್ಷ ಕೋಟಿ ರಿಸರ್ವಡ್ ಮೇಲೆ ಮೋದಿ ಕಣ್ಣಿಟ್ಟಿದ್ದು, ಅದನ್ನು ಬಳಕೆ ಮಾಡಿಕೊಂಡು ಲೂಟಿ ಮಾಡುವ ಆಲೋಚನೆಯಲ್ಲಿ ಇದ್ದಾರೆ. ಇದನ್ನು ತಡೆಯದೇ ಇದ್ದರೂ ದೇಶ ಇನ್ನಷ್ಟೂ ಆರ್ಥಿಕ ಸಂಕಷ್ಟಕ್ಕೆ ತಳ್ಳಲ್ಪಡುತ್ತದೆ ಎಂದು ಕಿಡಿಕಾರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ