ಆ್ಯಪ್ನಗರ

ಪ್ರವಾಹ ಸಂಕಷ್ಟ: ಕಲಬುರಗಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಬಿಎಸ್‌ವೈ ಸಭೆ

ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಭಾರೀ ಪ್ರವಾಹದಿಂದ ಜನಜೀವನ ತತ್ತರಿಸಿದೆ. ಈ ನಿಟ್ಟಿನಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಜಿಲ್ಲೆಗೆ ಭೇಟಿ ನೀಡಿ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.

Vijaya Karnataka Web 21 Oct 2020, 1:46 pm
ಕಲಬುರಗಿ: ಭಾರೀ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ ಉತ್ತರ ಕರ್ನಾಟಕ ಜಿಲ್ಲೆಯ ಪರಿಸ್ಥಿತಿಯ ಕುರಿತಾಗಿ ಸಿಎಂ ಬಿಎಸ್‌ ಯಡಿಯೂರಪ್ಪ ಹಿರಿಯ ಅಧಿಕಾರಿಗಳ ಜೊತೆಗೆ ಕಲಬುರಗಿಯಲ್ಲಿ ಸಭೆ ನಡೆಸಿದರು.
Vijaya Karnataka Web bsy


ಕಲಬುರಗಿಯ ವಿಮಾನ‌ ನಿಲ್ದಾಣದಲ್ಲಿ ಕಲಬುರಗಿ ಹಾಗೂ ಯಾದಗಿರಿ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಪ್ರವಾಹದ ಬಗ್ಗೆ ಚರ್ಚೆ ನಡೆಸಿದರು. ಜಿಲ್ಲೆಯ ಸದ್ಯದ ಸ್ಥಿತಿಗತಿ ಹಾಗೂ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತಾಗಿ ಮಾಹಿತಿ ಪಡೆದುಕೊಂಡರು.

ಎವ್ರಿ ಡೇ ಈಸ್‌ ನಾಟ್‌ ಸಂಡೇ: ಶಿರಾದಲ್ಲಿ ಕಮಲ ಅರಳದು ಎಂದ ಎಚ್‌ಡಿಕೆ

ಬುಧವಾರ ಕಲಬುರಗಿ ಜಿಲ್ಲೆಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆಗೆ ವೈಮಾನಿಕ ಸಮೀಕ್ಷೆ ನಡೆಸಿದರು. ಅಲ್ಲದೆ ಹಿರಿಯ ಅಧಿಕಾರಿಗಳ ಜೊತೆಗೆ ಸ್ಥಿತಿಗತಿಯ ಕುರಿತಾಗಿ ಮಾಹಿತಿ ಪಡೆದುಕೊಂಡರು.

ಪ್ರವಾಹ ಹಾಗೂ ಮಳೆಯಿಂದಾಗಿ ಕಲಬುರಗಿ, ಯಾದಗಿರಿ, ಬೆಳಗಾವಿ, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನರು ಸಂತ್ರಸ್ತರಾಗಿದ್ದಾರೆ. ಸಾವಿರಾರು ಜನರು ಮನೆ ಮಠ ಕಳೆದುಕೊಂಡಿದ್ದಾರೆ. ಪ್ರವಾಹದಿಂದ ಅಪಾಯದಲ್ಲಿರುವ ಜನರ ರಕ್ಷಣೆ ಮಾಡುವ ಕಾರ್ಯವೂ ಭರದಿಂದ ನಡೆಯುತ್ತಿದೆ.

ಪ್ರವಾಹ ಸಂಕಷ್ಟ: ಕಲಬುರಗಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್‌ವೈ

ಈ ನಡುವೆ ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂಬ ಬೇಡಿಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡಿದ್ದಾರೆ. ಇದಾಗ ಬಳಿಕ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಪ್ರಧಾನಿ ಮೋದಿ ಜೊತೆಗೆ ಈಗಾಗಲೇ ಅವರು ಫೋನ್ ಮೂಲಕ ಮಾತುಕತೆ ನಡೆಸಿ ರಾಜ್ಯದ ಸ್ಥಿತಿಗತಿಯ ಕುರಿತಾಗಿ ಮಾಹಿತಿ ನೀಡಿದ್ದಾರೆ. ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ದೆಹಲಿಗೆ ತೆರಳಿ ಹೆಚ್ಚಿನ ಅನುದಾನವನ್ನು ನೀಡುವಂತೆ ಮನವಿ ಮಾಡಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ