ಆ್ಯಪ್ನಗರ

ಸಿಎಂ ಪ್ರವಾಸ ಹಿನ್ನೆಲೆ: ಎಚ್ಚರ ವಹಿಸಲು ಸಲಹೆ

ಡಿಸಿ ಆಫೀಸ್‌ ಮೀಟಿಂಗ್‌ ಸಿಎಂ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ವಸತಿ ಇಲಾಖೆಯ ಸರಕಾರದ ...

Vijaya Karnataka 19 Jun 2019, 3:23 pm
ಕಲಬುರಗಿ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಇದೇ ಜೂನ್‌ 22ರಂದು ಕಲಬುರಗಿ ತಾಲೂಕಿನ ಹೇರೂರ(ಬಿ) ಗ್ರಾಮದಲ್ಲಿ ವಾಸ್ತವ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಗಳು ವಹಿಸಿದ ಜವಾಬ್ದಾರಿಯನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ವಸತಿ ಇಲಾಖೆಯ ಸರಕಾರದ ಕಾರ್ಯದರ್ಶಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಜೆ.ರವಿಶಂಕರ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web cm travel background advice on caution
ಸಿಎಂ ಪ್ರವಾಸ ಹಿನ್ನೆಲೆ: ಎಚ್ಚರ ವಹಿಸಲು ಸಲಹೆ


ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮಕ್ಕೆ ಸುಮಾರು 8-10 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಜನರು ವಿವಿಧ ಸಮಸ್ಯೆಗಳನ್ನು ಹೊತ್ತು ಬರಲಿದ್ದಾರೆ. ಹೀಗಾಗಿ ಆಯಾ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇಲಾಖೆಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಇಟ್ಟುಕೊಂಡಿರಬೇಕು. ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿ-ಸಿಬ್ಬಂದಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ತಮಗೆ ವಹಿಸಿದ ಜವಾಬ್ದಾರಿಯಲ್ಲಿ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ್‌ ಮಾತನಾಡಿ, ಸಿಎಂ ಪ್ರವಾಸದ ಮುನ್ನವೇ ರೈತ ಬಂಧುಗಳಿಗೆ ಜಿಲ್ಲೆಯಲ್ಲಿ ಸಾಲ ಮನ್ನಾ ಯೋಜನೆಯಡಿ ಆಗಿರುವ ಲಾಭದ ಬಗ್ಗೆ ಸಮಗ್ರ ಮಾಹಿತಿ ನೀಡಲು ಕ್ರಮ ವಹಿಸಬೇಕು. ಅಲ್ಲದೆ ಫಲಾನುಭವಿ ಆಧರಿತ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಹೆಚ್ಚಾಗಿ ಜನತಾ ದರ್ಶನದಲ್ಲಿ ಅರ್ಜಿ ಬರುವ ಸಾಧ್ಯತೆ ಇದೆ. ಹೀಗಾಗಿ, ಅಧಿಕಾರಿಗಳು ಸಮಗ್ರ ಮಾಹಿತಿ ಇಟ್ಟುಕೊಂಡಿರಬೇಕು ಸಲಹೆ ನೀಡಿದರು.

ಮಹಾನಗರ ಪಾಲಿಕೆ ಕಮಿಷನರ್‌ ಬಿ.ಫೌಜಿಯಾ ತರನ್ನುಮ್‌, ಜಿಲ್ಲಾ ಪೊಲೀಸ್‌ ಅಧೀಕ್ಷಕ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌, ಅಪರ ಜಿಲ್ಲಾಧಿಕಾರಿ ಬಿ.ಶರಣಪ್ಪ, ಸಹಾಯಕ ಆಯುಕ್ತ ರಾಹುಲ್‌ ಪಾಂಡ್ವೆ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ