ಆ್ಯಪ್ನಗರ

ಹೆಚ್ಚಿನ ದರಕ್ಕೆ ತಂಪು ಪಾನೀಯ: 44,500 ಶುಲ್ಕ ವಸೂಲಿ

ಹೆಚ್ಚಿನ ದರದಲ್ಲಿ ತಂಪು ಪಾನೀಯ/ ಮಿನರಲ್‌ ವಾಟರ್‌ ಬಾಟಲ್‌ಗಳನ್ನು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 34 ಅಂಗಡಿಗಳ ಮೇಲೆ ದಾಳಿ ನಡೆಸಿ 10 ಮಾರಾಟಗಾರರ ಮೇಲೆ ಮೊಕದ್ದಮೆ ಹೂಡಿ ರೂ. 44,500 ಅಭಿಸಂಧಾನ ಶುಲ್ಕ ವಸೂಲಿ ಮಾಡಲಾಗಿದೆ.

Vijaya Karnataka 25 May 2019, 5:00 am
ಕಲಬುರಗಿ: ಹೆಚ್ಚಿನ ದರದಲ್ಲಿ ತಂಪು ಪಾನೀಯ/ ಮಿನರಲ್‌ ವಾಟರ್‌ ಬಾಟಲ್‌ಗಳನ್ನು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 34 ಅಂಗಡಿಗಳ ಮೇಲೆ ದಾಳಿ ನಡೆಸಿ 10 ಮಾರಾಟಗಾರರ ಮೇಲೆ ಮೊಕದ್ದಮೆ ಹೂಡಿ ರೂ. 44,500 ಅಭಿಸಂಧಾನ ಶುಲ್ಕ ವಸೂಲಿ ಮಾಡಲಾಗಿದೆ.
Vijaya Karnataka Web cool drink for high rates 44500 fees off
ಹೆಚ್ಚಿನ ದರಕ್ಕೆ ತಂಪು ಪಾನೀಯ: 44,500 ಶುಲ್ಕ ವಸೂಲಿ


ಕಾನೂನು ಮಾಪನಶಾಸ್ತ್ರ ಇಲಾಖೆಯಿಂದ ಮೇ 15ರಿಂದ 22ರವರೆಗೆ ಜಿಲ್ಲೆಯಾದ್ಯಂತ ಕಾರ್ಯಾಚರಣೆ ಮಾಡಿ ಈ ಅಭಿಸಂಧಾನ ಶುಲ್ಕ ವಸೂಲಿ ಮಾಡಲಾಗಿದೆ. ಇಂತಹ ಪ್ರಕರಣ ಕಂಡು ಬಂದಲ್ಲಿ ಗ್ರಾಹಕರು ತಕ್ಷಣ ಕಲಬುರಗಿಯ ಕಾನೂನು ಮಾಪನಶಾಸ್ತ್ರ ಇಲಾಖೆಯ ದೂರವಾಣಿ ಸಂಖ್ಯೆ 08472-220443ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿಯಂತ್ರಕ ರಫೀಕ್‌ಸಾಬ್‌ ಲಾಡಜಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ