ಆ್ಯಪ್ನಗರ

ಹೆಚ್ಚುವರಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಆಗ್ರಹ

ಗುಲ್ಬರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಮಂಜೂರಾತಿ ನೀಡಬೇಕು ಎಂದು ಸಂಸದ ಡಾ. ಉಮೇಶ್‌ ಜಾಧವ್‌ ಲೋಕಸಭೆಯಲ್ಲಿ ಗಮನ ಸೆಳೆದರು.

Vijaya Karnataka 6 Jul 2019, 10:10 pm
ಕಲಬುರಗಿ:ಗುಲ್ಬರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಮಂಜೂರಾತಿ ನೀಡಬೇಕು ಎಂದು ಸಂಸದ ಡಾ. ಉಮೇಶ್‌ ಜಾಧವ್‌ ಲೋಕಸಭೆಯಲ್ಲಿ ಗಮನ ಸೆಳೆದರು.
Vijaya Karnataka Web demanding the establishment of an additional kendriya vidyalaya
ಹೆಚ್ಚುವರಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಆಗ್ರಹ


ಲೋಕಸಭೆಯ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಂಸದ ಜಾಧವ್‌, ಕಲಬುರಗಿ ನಗರದಲ್ಲಿ 10 ಲಕ್ಷ ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಗುಲ್ಬರ್ಗ ವಿದ್ಯಾ ಕ್ಷೇತ್ರವಾಗಿದೆ. 5 ವಿಶ್ವ ವಿದ್ಯಾಲಯಗಳನ್ನು ಒಳಗೊಂಡಿದೆ. ಉತ್ತರ ಕರ್ನಾಟಕ ವಿಭಾಗವಾಗಿ ಗುಲ್ಬರ್ಗ ಕೇಂದ್ರೀಕೃತವಾಗಿದೆ. ಅತಿ ಹೆಚ್ಚು ಕೇಂದ್ರ ಸರಕಾರದ ಅಧಿಕಾರಿಗಳು ವಾಸವಾಗಿದ್ದು, ಕೇಂದ್ರೀಯ ವಿದ್ಯಾಲಯದಲ್ಲಿ ಗುಣಮಟ್ಟದ ಶಿಕ್ಷ ಣ ಸಿಗುತ್ತಿದೆ ಎಂದಿದ್ದಾರೆ.

ನನ್ನ ಮತಕ್ಷೇತ್ರದ ವ್ಯಾಪ್ತಿಯ ಯಾದಗಿರಿ ಜಿಲ್ಲೆಯಲ್ಲೂ ಯಾವುದೇ ಕೇಂದ್ರೀಯ ವಿದ್ಯಾಲಯವಿಲ್ಲ. ಹೀಗಾಗಿ ಹೆಚ್ಚುವರಿ ಕೇಂದ್ರೀಯ ವಿದ್ಯಾಲಯ ಸ್ಥಾಪಿಸಲು ಬೇಡಿಕೆ ಹೆಚ್ಚಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವರು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚುವರಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ