ಆ್ಯಪ್ನಗರ

ದೋಟಿಹಾಳ ರೈತ ಆತ್ಮಹತ್ಯೆ

ಜಿಲ್ಲೆಯ ಚಿಂಚೋಳಿ ತಾಲೂಕಿನ ದೋಟಿಹಾಳ ಗ್ರಾಮದ ರೈತ ಪದ್ಮಣ್ಣ ತಂದೆ ಮಲ್ಲಪ್ಪ ಪೂಜಾರಿ(35) ಸಾಲದ ಬಾಧೆ ತಾಳಲಾರದೆ ಶುಕ್ರವಾರ ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 24 Aug 2019, 5:00 am
ಕಲಬುರಗಿ:ಜಿಲ್ಲೆಯ ಚಿಂಚೋಳಿ ತಾಲೂಕಿನ ದೋಟಿಹಾಳ ಗ್ರಾಮದ ರೈತ ಪದ್ಮಣ್ಣ ತಂದೆ ಮಲ್ಲಪ್ಪ ಪೂಜಾರಿ(35) ಸಾಲದ ಬಾಧೆ ತಾಳಲಾರದೆ ಶುಕ್ರವಾರ ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web dhotihal farmer suicide
ದೋಟಿಹಾಳ ರೈತ ಆತ್ಮಹತ್ಯೆ


ಪತ್ನಿ ಪಾರ್ವತಿ, ಇಬ್ಬರು ಪುತ್ರಿಯರು ಇದ್ದಾರೆ. ಗ್ರಾಮೀಣ ಬ್ಯಾಂಕಿನಲ್ಲಿ 2 ಲಕ್ಷ ರೂ ಹಾಗೂ ಖಾಸಗಿ ವ್ಯಕ್ತಿಗಳ ಬಳಿಯಲ್ಲಿ 1. 50 ಲಕ್ಷ ರೂ. ಸಾಲ ಮಾಡಿದ್ದ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕಳೆದ ಎರಡು ವರ್ಷಗಳಿಂದ ಹೊಲ ಏನು ಬೆಳೆಯದೇ ಇರುವ ಹಿನ್ನೆಲೆಯಲ್ಲಿ ಸಾಲಗಾರರ ಕಿರಿಕಿರಿ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದಿದೆ. ಸುಲೇಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತ ಸಂಘ ಆಗ್ರಹ: ಪದ್ಮಣ್ಣನನ್ನು ಕಳೆದುಕೊಂಡು ಇಡೀ ಕುಟುಂಬ ಕಂಗಾಲಾಗಿದೆ. ಕೂಡಲೇ ಆತನ ಕುಟುಂಬಕ್ಕೆ ಪರಿಹಾರ ನೀಡಬೇಕು. ಇಬ್ಬರು ಮಕ್ಕಳ ಶಾಲೆಯ ಹೊಣೆಯನ್ನು ಸರಕಾರ ವಹಿಸಿಕೊಳ್ಳಬೇಕು. ಸಾಲವನ್ನು ಮನ್ನಾ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ