ಆ್ಯಪ್ನಗರ

ವನ ಮಹೋತ್ಸವ ಆಚರಣೆಗೆ ಸೀಮಿತ ಬೇಡ

ತಾಲೂಕಿನ ಮಹಾಗಾಂವ ಕಳ್ಳಿಮಠ ಹಾಗೂ ವೀರೂಪಾಕ್ಷೇಶ್ವರ ಶಿಕ್ಷಣ ಸಮಿತಿ ವತಿಯಿಂದ ಹಮ್ಮಿಕೊಂಡ ವನ ಮಹೋತ್ಸವ ಸಮಾರಂಭಕ್ಕೆ ಕಳ್ಳಿಮಠದ ಪೀಠಾಧಿಪತಿ ಗುರುಲಿಂಗ ಶಿವಾಚಾರ್ಯರು ಚಾಲನೆ ನೀಡಿ ಆಶೀರ್ವಚನ ನೀಡಿದರು.

Vijaya Karnataka 7 Jun 2019, 3:44 pm
ಕಲಬುರಗಿ :ತಾಲೂಕಿನ ಮಹಾಗಾಂವ ಕಳ್ಳಿಮಠ ಹಾಗೂ ವೀರೂಪಾಕ್ಷೇಶ್ವರ ಶಿಕ್ಷಣ ಸಮಿತಿ ವತಿಯಿಂದ ಹಮ್ಮಿಕೊಂಡ ವನ ಮಹೋತ್ಸವ ಸಮಾರಂಭಕ್ಕೆ ಕಳ್ಳಿಮಠದ ಪೀಠಾಧಿಪತಿ ಗುರುಲಿಂಗ ಶಿವಾಚಾರ್ಯರು ಚಾಲನೆ ನೀಡಿ ಆಶೀರ್ವಚನ ನೀಡಿದರು.
Vijaya Karnataka Web do not be limited to the celebration of van jubilee
ವನ ಮಹೋತ್ಸವ ಆಚರಣೆಗೆ ಸೀಮಿತ ಬೇಡ


ವನ ಮಹೋತ್ಸವ ವರ್ಷದಲ್ಲಿ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೆ ನಿರಂತರವಾಗಿ ಆಚರಿಸಬೇಕು. ಕೇವಲ ಆಚರಣೆಯಿಂದ ಯಾವುದೇ ಪ್ರಯೋಜನ ಇಲ್ಲ. ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯ ಹಿತ ದೃಷ್ಟಿಯಿಂದ ಗಿಡಗಳನ್ನು ನೆಟ್ಟು ಅವುಗಳ ರಕ್ಷಣೆಗೆ ಒತ್ತು ನೀಡಬೇಕೆಂದು ಕಿವಿಮಾತು ಹೇಳಿದರು.

ಅಭಿವದ್ಧಿ ಕೆಲಸಗಳಿಗೆ ಮರಗಳನ್ನು ಕಡಿಯಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಆದರೆ, ಅದಕ್ಕೆ ಪರ್ಯಾಯವಾಗಿ ಇತರೆಡೆಗಳಲ್ಲಿ ಗಿಡಗಳನ್ನು ನೆಟ್ಟು ಬೆಳೆಸಬೇಕು. ಮಕ್ಕಳ ಭವಿಷ್ಯಕ್ಕೆ ಹಣ ಕೂಡಿಡುವ ಬದಲು ಬೆಲೆ ಬಾಳುವ ಮರಗಳನ್ನು ಬೆಳೆಸಿದರೆ ಕಷ್ಟ ಕಾಲದಲ್ಲಿ ಆಸರೆಯಾಗುತ್ತವೆ ಎಂದು ಕಿವಿಮಾತು ಹೇಳಿದರು.

ವೀರಭದ್ರಪ್ಪ ಪಸಾರ, ಈಶ್ವರ ಹತ್ತಿ, ಶರಣಪ್ಪ ಕಲ್ಯಾಣ, ಲಿಂಗರಾಜ ಬಾಳಿ, ಅಂಬರೀಷ್‌ ಬಂಗಶೆಟ್ಟಿ, ಗುರುರಾಜ ಹಿರೇಮಠ, ಬಸವರಾಜ ಶೀಲವಂತ, ಸುಭಾಷ್‌ ಪಂಚಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ