ಆ್ಯಪ್ನಗರ

ಪರೀಕ್ಷೆಯ ಭಯ ಬೇಡ, ಅರಳಿ ನಾಗರಾಜ ಸಲಹೆ

ಮಹಾಗಾಂವ ಕ್ರಾಸ್‌ ಕಳ್ಳಿ ಮಠದ ಮಹಾಂತೇಶ್ವರ ಪ್ರೌಢಶಾಲೆಯಲ್ಲಿಈಚೆಗೆ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಜರುಗಿತು.

Vijaya Karnataka 17 Nov 2019, 4:40 pm
ಕಲಬುರಗಿ:ಮಹಾಗಾಂವ ಕ್ರಾಸ್‌ ಕಳ್ಳಿ ಮಠದ ಮಹಾಂತೇಶ್ವರ ಪ್ರೌಢಶಾಲೆಯಲ್ಲಿಈಚೆಗೆ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಜರುಗಿತು.
Vijaya Karnataka Web dont be afraid of exams
ಪರೀಕ್ಷೆಯ ಭಯ ಬೇಡ, ಅರಳಿ ನಾಗರಾಜ ಸಲಹೆ


ಈ ವೇಳೆ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮಕ್ಕಳು ಕಾನೂನುಗಳ ಕುರಿತು ತಿಳಿದುಕೊಳ್ಳಬೇಕು. ಕಾನೂನು ನಿಯಮಗಳನ್ನು ಪಾಲಿಸುವುದು ಮುಖ್ಯ ಎಂದರು.

ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನ ನಡೆಸಿದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯಶಸ್ವಿಯಾಗಬಹುದು. ಕೇವಲ ಅಂಕಗಳಿಗೆ ಸಿಮೀತರಾಗದೇ ಜ್ಞಾನ ಸಂಪಾದನೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಕಳ್ಳಿಮಠದ ಗುರುಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಮಾತನಾಡಿದರು. ನ್ಯಾಯವಾದಿ ಎಂ.ಸಿ.ಕೋರಿಶೆಟ್ಟಿ, ಮಹಾಂತೇಶ್ವರ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯಶಿಕ್ಷಕ ಅನಿಲಕುಮಾರ ಕೋರೆ, ರೇವಣಸಿದ್ದಪ್ಪ ನಿಂಬಾಜಿ, ಮುರುಘರಾಜ ಹಿರೇಮಠ, ಬಸವರಾಜ ಶೀಲವಂತ ಹಾಗೂ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ