ಆ್ಯಪ್ನಗರ

ಶಾಸಕ ಮಾಲೀಕಯ್ಯ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ

ಅಫಜಲಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಮಾಲೀಕಯ್ಯ ಗುತ್ತೇದಾರ್‌ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಬಿಜೆಪಿ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್‌ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

Vijaya Karnataka 8 May 2018, 4:47 pm
ಕಲಬುರಗಿ : ಅಫಜಲಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಮಾಲೀಕಯ್ಯ ಗುತ್ತೇದಾರ್‌ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಬಿಜೆಪಿ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್‌ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
Vijaya Karnataka Web fake facebook account in mla malikayya name
ಶಾಸಕ ಮಾಲೀಕಯ್ಯ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ


ಈ ಕುರಿತು ಬಿಜೆಪಿ ಅಫಜಲಪುರ ತಾಲೂಕು ಘಟಕದ ಅಧ್ಯಕ್ಷ ಸೂರ್ಯಕಾಂತ ನಾಕೇದಾರ್‌ ಅವರು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ನಕಲಿ ಖಾತೆ ತೆರೆದ ಕಿಡಿಗೇಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಬಿಜೆಪಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪೋಸ್ಟ್‌ ಮಾಡುವುದರ ಜೊತೆಗೆ ಕಾಂಗ್ರೆಸ್‌ ಪರ ಹೇಳಿಕೆಗಳನ್ನು ಪೋಸ್ಟ್‌ ಮಾಡಿದ್ದು, ಇದರಿಂದ ಶಾಸಕ ಮಾಲೀಕಯ್ಯ ಅವರ ಘನತೆಗೆ ಧಕ್ಕೆ ಬಂದಿದೆ. ಹೀಗಾಗಿ, ತಕ್ಷಣ ಕಿಡಿಗೇಡಿಯನ್ನು ಗುರುತಿಸಿ ಬಂಧಿಸಬೇಕೆಂದು ನಾಕೇದಾರ್‌ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ