ಆ್ಯಪ್ನಗರ

ರೈತ ಆತ್ಮಹತ್ಯೆ

ಸಾಲಬಾಧೆ ತಾಳದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಕ್ತಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

Vijaya Karnataka 24 Aug 2019, 5:00 am
ಕೆಂಭಾವಿ :ಸಾಲಬಾಧೆ ತಾಳದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಕ್ತಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
Vijaya Karnataka Web farmer suicide
ರೈತ ಆತ್ಮಹತ್ಯೆ


ಗ್ರಾಮದ ನಾಗಪ್ಪ ಮಾದರ (35) ಆತ್ಮಹತ್ಯೆಗೆ ಶರಣಾದ ರೈತ. ಈತ ಮನೆಯಲ್ಲೆ ವಿಷ ಸೇವಿಸಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಬೊಮ್ಮನಹಳ್ಳಿ ಸಹಕಾರ ಸಂಘದಲ್ಲಿ 25 ಸಾವಿರ, ಕೆಂಭಾವಿ ಎಸ್‌.ಬಿ.ಐ ಬ್ಯಾಂಕಿನಲ್ಲಿ 70 ಸಾವಿರ ಹಾಗೂ ಖಾಸಗಿಯಾಗಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಮೃತ ರೈತನ ಹೆಂಡತಿ ಭೀಮಬಾಯಿ ನೀಡಿದ ದೂರಿನನ್ವಯ ಕೆಂಭಾವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ