ಆ್ಯಪ್ನಗರ

ಬಾಕಿ ‘ಖಾತರಿ’ ವೇತನ ಪಾವತಿಗೆ ಒತ್ತಾಯ

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ದುಡಿದ ಕಾರ್ಮಿಕರಿಗೆ ನೀಡದೆ ಬಾಕಿ ಉಳಿಸಿಕೊಂಡಿರುವ ವೇತನ ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಪದಾಧಿಕಾರಿಗಳು ಇಲ್ಲಿನ ಜಗತ್‌ ವೃತದಲ್ಲಿ ಗುರುವಾರ ಧರಣಿ ನಡೆಸಿದರು.

Vijaya Karnataka 8 Jun 2018, 5:00 am
ಕಲಬುರಗಿ : ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ದುಡಿದ ಕಾರ್ಮಿಕರಿಗೆ ನೀಡದೆ ಬಾಕಿ ಉಳಿಸಿಕೊಂಡಿರುವ ವೇತನ ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಪದಾಧಿಕಾರಿಗಳು ಇಲ್ಲಿನ ಜಗತ್‌ ವೃತದಲ್ಲಿ ಗುರುವಾರ ಧರಣಿ ನಡೆಸಿದರು.
Vijaya Karnataka Web force workers to pay wages
ಬಾಕಿ ‘ಖಾತರಿ’ ವೇತನ ಪಾವತಿಗೆ ಒತ್ತಾಯ


ಆಳಂದ ತಾಲೂಕಿನ ಶ್ರೀಚಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಡಲ್‌ ಗ್ರಾಮದಲ್ಲಿ 200ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಸುಮಾರು ಐದು ವಾರಗಳಿಂದ ಕೆಲಸ ಮಡುತ್ತಿದ್ದಾರೆ. ಈವರೆಗೆ ಕಾರ್ಮಿಕರಿಗೆ ವೇತನ ಪಾವತಿಯಾಗಿಲ್ಲ. ಇದರ ಜೊತೆಗೆ ಕೊಟ್ಟರ್ಗಾ ಮತ್ತು ಹೊಡಲ್‌, ಜವಳಗಾ ಗ್ರಾಮಗಳ ಸುಮಾರು 200ಕ್ಕೂ ಹೆಚ್ಚು ಕೂಲಿಕಾರರು ಕೆಲಸ ಮಾಡಿದ್ದರೂ ಎರಡು ವಾರಗಳ ವೇತನ ಬಾಕಿ ಉಳಿಸಿಕೊಳ್ಳಲಾಗಿದೆ. ಈ ಕುರಿತು ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ (ನರೇಗಾ) ಅವರ ಗಮನಕ್ಕೆ ತಂದರೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೂಡಲೇ ಬಡ ಕೂಲಿ ಕಾರ್ಮಿಕರ ವೇತನ ಪಾವತಿಸಬೇಕೆಂದು ಧರಣಿ ನಿರತರು ಆಗ್ರಹಿಸಿದರು.

ಸಂಘದ ಅಧ್ಯಕ್ಷ ಮಲ್ಲಪ್ಪ ಪೂಜಾರಿ ಹೊಡಲ್‌, ಜಿಲ್ಲಾ ಕಾರ್ಯದರ್ಶಿ ಮೋಹನ್‌ ಎಂ. ಕಟ್ಟಿಮನಿ, ಜಿಲ್ಲಾ ಸಹ ಕಾರ್ಯದರ್ಶಿ ಚಂದಪ್ಪ ಪೂಜಾರಿ ಹಾವನೂರು, ಮುಖಂಡರಾದ ಮಾಣಿಕ್‌ ಜಮಾದಾರ್‌, ಜಯಶ್ರೀ ಎಂ. ಕಟ್ಟಿಮನಿ, ಶ್ರೀಪತಿ ಹೊಡಲ್‌, ಶರಣು ಭೈರಾಮಡಗಿ, ಅನ್ನಪೂರ್ಣದೇವಿ ಕೊಟ್ಟರಗಿ ಹಾಗೂ ಅನಿಲ್‌ ಕೋಟೆ ಸೇರಿದಂತೆ ಇನ್ನಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ