ಆ್ಯಪ್ನಗರ

ಕಲಬುರಗಿ: ಆಸ್ತಿ ಕಲಹ ಶಂಕೆ, ಗ್ರಾಪಂ ಸದಸ್ಯ ಕೊಲೆ

ಆಸ್ತಿ ಕಲಹಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಘಟನೆ ಇಲ್ಲಿನ ಕೈಲಾಸ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.

Vijaya Karnataka Web 2 Nov 2020, 11:25 pm
ಕಲಬುರಗಿ: ಆಸ್ತಿ ಕಲಹಕ್ಕೆ ಸಂಬಂಧಿಸಿದಂತೆ ಹೊಗೆಯಾಡುತ್ತಿದ್ದ ದ್ವೇಷದಿಂದಾಗಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
Vijaya Karnataka Web ಪೊಲೀಸ್‌
ಪೊಲೀಸ್


ಈ ಘಟನೆ ಇಲ್ಲಿನ ಕೈಲಾಸ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಆಳಂದ ತಾಲೂಕಿನ ಕಡಗಂಚಿ ಗ್ರಾಮ ಪಂಚಾಯತಿ ಸದಸ್ಯ ಶಿವ ಲಿಂಗಪ್ಪ ಭೋಗಶೆಟ್ಟಿ ಕೊಲೆಯಾದ ವ್ಯಕ್ತಿ.

ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಡಿಸಿಪಿ ಕಿಶೋರ್ ಬಾಬು ಹಾಗೂ ರಾಘವೇಂದ್ರ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರ್.ಜಿ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ