ಆ್ಯಪ್ನಗರ

ರೈತ ಸಂಘದಿಂದ ಹೆದ್ದಾರಿ ಬಂದ್‌ 21ರಂದು

ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಜುಲೈ 21ರಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಸ್ವರಾಜ… ಇಂಡಿಯಾ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಬಳಿ ಹಿಟ್ನಾಳ ಕ್ರಾಸ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್‌ ತಿಳಿಸಿದರು.

Vijaya Karnataka 15 Jul 2018, 5:08 pm
ಕಲಬುರಗಿ : ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಜುಲೈ 21ರಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಸ್ವರಾಜ… ಇಂಡಿಯಾ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಬಳಿ ಹಿಟ್ನಾಳ ಕ್ರಾಸ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್‌ ತಿಳಿಸಿದರು.
Vijaya Karnataka Web highway 21 from the farmers union
ರೈತ ಸಂಘದಿಂದ ಹೆದ್ದಾರಿ ಬಂದ್‌ 21ರಂದು


ಶನಿವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಪುನಶ್ಚೇತನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ವಿಶೇಷ ಪ್ಯಾಕೇಜ… ನೀಡದೆ ಅನ್ಯಾಯ ಮಾಡಿವೆ. ಸಾಲ ಮನ್ನಾ ಮಾಡಲು ಷರತ್ತುಗಳನ್ನು ವಿಧಿಸಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರೈತರನ್ನು ವಂಚಿಸಿದ್ದಾರೆ. ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ ಹಾಗೆ ಮಹಿಳೆಯರು, ಮತ್ತು ಹಿರಿಯ ನಾಗರಿಕರಿಗೆ ನೀಡಿದ್ದ ಭರವಸೆಯನ್ನು ಈಡೇರಿಸದೆ ಮಾತು ತಪ್ಪಿದ್ದಾರೆ ಎಂದು ದೂರಿದರು.

ಮುಕ್ತ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ರೈತ ಬೆಳೆದ ಧಾನ್ಯ ಮಾರಾಟವಾಗದಂತೆ ಕಾನೂನು ರೂಪಿಸಬೇಕು. ಜೊತೆಗೆ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದಂತೆ ಸಂಪೂರ್ಣ ಸಾಲ ಮನ್ನಾಡಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡರಾದ ಮಲ್ಲಿಕಾರ್ಜುನ ಸತ್ಯಂಪೇಟೆ, ಅಂಬರೀಶಗೌಡ ಬಳಬಟ್ಟಿ, ಅಯ್ಯಣ್ಣ ಹಾಲಬಾವಿ, ನಾಗರತ್ನಮ್ಮ ಪಾಟೀಲ್‌, ಮಂಜುಳಾ ಭಜಂತ್ರಿ ಸೇರಿದಂತೆ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ