ಆ್ಯಪ್ನಗರ

ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ

ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಸಂಬಂಧ ದೆಹಲಿಯ ತೊಘಲಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ‌ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Vijaya Karnataka Web 11 Mar 2018, 1:26 pm
ಕಲಬುರಗಿ: ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಸಂಬಂಧ ದೆಹಲಿಯ ತೊಘಲಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ‌ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Vijaya Karnataka Web life threat to mallikarjun kharge
ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ


ಅನಾಮಿಕರಿಂದ ನನಗೂ ಬೆದರಿಕೆ ಕರೆ ಬರುತ್ತಿವೆ, ಇದನ್ನು ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಮತ್ತು ಸ್ಪೀಕರ್ ಗಮನಕ್ಕೆ ತಂದಿದ್ದೇನೆ. ಈ ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ದೂರವಾಣಿ ಬೆದರಿಕೆ ಕರೆ ಬರುತ್ತಿವೆ ಎಂದು ಖರ್ಗೆ ಹೇಳಿದ್ದಾರೆ.

ಖೇಣಿ ಕಾಂಗ್ರೆಸ್‌ ಸೇರ್ಪಡೆಗೆ ಅಸಮಾಧಾನ

ಅಶೋಕ್ ಖೇಣಿ‌ ಕಾಂಗ್ರೆಸ್ ಸೇರ್ಪಡೆಗೆ ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖೇಣಿ ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಬಂದಿದ್ದಾರೋ ಗೊತ್ತಿಲ್ಲ, ಅವರನ್ನು ಪಕ್ಷಕ್ಕೆ ಕರೆತಂದವರೇ ಹೇಳಬೇಕು.. ಯಾಕೆ ಬಂದಿದ್ದಾರೆ ಮತ್ತು ಅವರಿಂದ ಏನು ಲಾಭ ಅಂತ ಅವರೇ ಹೇಳಬೇಕು. ಈ ಬಗ್ಗೆ ನಾನು ಹೆಚ್ಚೇನು ಹೇಳುವುದಿಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ